ಉದ್ಯೋಗ ಮಾಹಿತಿ : ಶೀಘ್ರಲಿಪಿ ಮತ್ತು ಬೆರಳಚ್ಚುಗಾರರ ಹುದ್ದೆಗಳ ಭರ್ತಿ

ಈ ಸುದ್ದಿಯನ್ನು ಶೇರ್ ಮಾಡಿ

AG

ರಾಜ್ಯ ಉಚ್ಛನ್ಯಾಯಾಲಯದ ಅಡ್ವೊಕೇಟ್ ಜನರಲ್ ರವರ ಕಛೇರಿಯಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 38
ಹುದ್ದೆಗಳ ವಿವರ
ಶೀಘ್ರಲಿಪಿಗಾರರು – 37
ಬೆರಳಚ್ಚುಗಾರರು – 01
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಅಥವಾ ಇದಕ್ಕೆ ಸಮನಾದ ಶಿಕ್ಷಣವನ್ನು ಪಡೆದಿರಬೇಕು. ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚುಗಾರರ ಪರೀಕ್ಷೆಯಲ್ಲಿ ಪ್ರೌಢದರ್ಜೆಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ ನಿಗದಿಮಾಡಲಾಗಿದ್ದು, ಗರಿಷ್ಠ ವಯಸನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರ ಹಿಂದುಳಿದ 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ, ಪ್ರವರ್ಗ – 1 ರ ವರ್ಗಕ್ಕೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.
ಶುಲ್ಕ : ಸಾಮಾನ್ಯ ವರ್ಗದವರಿಗೆ 300 ರೂ, 2ಎ, 2ಬಿ, 3ಎ, 3ಬಿ ವರ್ಗದವರಿಗೆ 150 ರೂ, ಪ.ಜಾ, ಪ.ಪಂ, ಪ್ರವರ್ಗ – 1 ಮತ್ತು ಅಂಗವಿಕಲರಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : ಆಡಳಿತಾಧಿಕಾರಿ, ಅಡ್ವೊಕೇಟ್ ಜನರಲ್ ರವರ ಕಛೇರಿ, ಉಚ್ಛನ್ಯಾಯಾಲಯ, ಹಳೆಯ ಕೆಜಿಐಡಿ ಕಟ್ಟಡ ಬೆಂಗಳೂರು – 560001 ಇಲ್ಲಿ ಸಲ್ಲಿಸುವಂತೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಕಡೆಯ ದಿನಾಂಕ : 31-01-2018
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ  http://www.advgen.kar.nic.in/about_ag.asp   ಗೆ
ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

Facebook Comments

Sri Raghav

Admin