ಕರ್ನಾಟಕದಲ್ಲಿ ಮಾನಸಿಕ ಒತ್ತಡ, ಖಿನ್ನತೆಯಿಂದ ದಿನಕ್ಕೊಬ್ಬ ವಿದ್ಯಾರ್ಥಿ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

Student--02

ಬೆಂಗಳೂರು, ಜ.6-ತೀವ್ರ ಮಾನಸಿಕ ಒತ್ತಡ ಹಾಗೂ ಖಿನ್ನತೆಯ ಪರಿಣಾಮ ರಾಜ್ಯದಲ್ಲಿ ಪ್ರತಿದಿನ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗುತ್ತಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ. ದಕ್ಷಿಣ ಭಾರತದಲ್ಲಿ ತಮಿಳುನಾಡು(2,789) ಅತಿಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆಕೊಂಡ ರಾಜ್ಯವಾಗಿದೆ. ನಂತರದ ಸ್ಥಾನದಲ್ಲಿ ಕರ್ನಾಟಕ(1707), ಮೂರನೇ ಸ್ಥಾನದಲ್ಲಿ (1193), ನಾಲ್ಕನೇ ಸ್ಥಾನದಲ್ಲಿ ಕೇರಳ ಹಾಗೂ ಆಂಧ್ರಪ್ರದೇಶದ(988) ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  2014-16ರ ಅವಧಿಯಲ್ಲಿ ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ 7,809 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

2016ರ ಅವಧಿಯಲ್ಲಿ ಕರ್ನಾಕದಲ್ಲೇ 540 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದಾಖಲೆಗಳಿಂದಲೇ ಸಾಬೀತಾಗಿದೆ. ಎರಡು ದಿನಕ್ಕೆ ಮೂವರು ವಿದ್ಯಾರ್ಥಿಗಳು ಸಾವಿಗೆ ಶರಣಾಗುತ್ತಿದ್ದಾರೆ.  ಕಳೆದ ವರ್ಷ ಕರ್ನಾಟಕದಲ್ಲಿ 540, ತಮಿಳುನಾಡು 981 ವಿದ್ಯಾರ್ಥಿಗಳು ಮಾನಸಿಕ ಖಿನ್ನತೆ ಹಾಗೂ ಒತ್ತಡಕ್ಕೆ ಮಣಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮಾನಸಿಕ, ಸಾಮಾಜಿಕ, ಜೈವಿಕ ಸೇರಿದಂತೆ ಮತ್ತಿತರ ಕಾರಣಗಳಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

ಇದರ ಜೊತೆಗೆ ಚಿಕ್ಕ ವಯಸ್ಸಿನಲ್ಲೇ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುವುದು, ಮದ್ಯಪಾನ, ಧೂಮಪಾನ, ಶೋಕಿ ಜೀವನವು ಈ ಆತ್ಮಹತ್ಯೆಗೆ ಮತ್ತೊಂದು ಕಾರಣವಾಗಿದೆ.  ಇವೆಲ್ಲದಕ್ಕಿಂತ ಹೆಚ್ಚಾಗಿ ಪೋಷಕರ ಒತ್ತಡವೂ ಕೂಡ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಇತರರಿಗಿಂತಲೂ ಹೆಚ್ಚಿನ ಅಂಕ ಪಡೆಯಬೇಕೆಂದು ಒತ್ತಡ ಹಾಕುತ್ತಾರೆ. ಪ್ರತಿದಿನ ಕಟ್ಟುನಿಟ್ಟಾಗಿ ಇಷ್ಟೇ ಅವಧಿ ಓದಬೇಕು, ಪರೀಕ್ಷೆಗಳಲ್ಲಿ ಇಂತಿಷ್ಟೇ ಅಂಕಗಳನ್ನು ಗಳಿಸಬೇಕು ಎಂದು ಒತ್ತಡ ಹಾಕುತ್ತಿರುವುದು ಮತ್ತೊಂದು ಕಾರಣವಾಗಿದೆ.   ಯಾವ ವಿದ್ಯಾರ್ಥಿ ತಮ್ಮ ಪೋಷಕರ ಒತ್ತಡವನ್ನು ಧೈರ್ಯದಿಂದ ಎದುರಿಸಲು ಸಾಧ್ಯವಿಲ್ಲವೋ ಅಂಥವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆಂದು ಮಾನಸಿಕ ತಜ್ಞರು ಹೇಳುತ್ತಾರೆ.   ಪೋಷಕರು ಮಕ್ಕಳಿಗೆ ಒತ್ತಡ ಹಾಕದ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರವಹಿಸಿ ಸನ್ಮಾರ್ಗದಲ್ಲಿ ನಡೆಯುವಂತೆ ನೋಡಿಕೊಂಡರೆ ಆತ್ಮಹತ್ಯೆ ತಡೆಯಬಹುದೆಂಬ ಸಲಹೆ ತಜ್ಞರಿಂದ ವ್ಯಕ್ತವಾಗಿದೆ.

Facebook Comments

Sri Raghav

Admin