ಗನ್ ತೋರಿಸಿ ಮಹಿಳೆ ಮೇಲೆ ಗ್ಯಾಂಗ್‍ರೇಪ್

ಈ ಸುದ್ದಿಯನ್ನು ಶೇರ್ ಮಾಡಿ

Rape-Gun--02

ಬಾಂಡಾ(ಉ.ಪ್ರ.), ಜ.6-ಉತ್ತರ ಪ್ರದೇಶ ಮತ್ತು ನವದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ಮೂವರು ಶಸ್ತ್ರಸಜ್ಜಿತ ದುಷ್ಕಮಿಗಳು ಮಹಿಳೆಯೊಬ್ಬಳ ಪತಿ ಮತ್ತು ಮೈದುನನನ್ನು ಒತ್ತೆಯಾಳಾಗಿಟ್ಟುಕೊಂಡು, ಗನ್ ತೋರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಭಡಾವಾಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.  ಬಾಂಡಾ-ಚಿತ್ರಕೂಟ ಗಡಿಯಲ್ಲಿ ಕುಟುಂಬವೊಂದು ನದಿ ದಾಟುತ್ತಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ.   ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಗ್ಯಾಂಗ್ ರೇಪ್ : ಮೂವರ ಸೆರೆ : ವಾಯುವ್ಯ ದೆಹಲಿಯ ಶಾಲಿಮಾರ್ ಭಾಗ್‍ನ ಉದ್ಯಾನವನವೊಂದರಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಗೆಳೆಯನೊಂದಿಗೆ ಪಾರ್ಕ್‍ನಲ್ಲಿ ಕುಳಿತಿದ್ದಾಗ ಈ ಘಟನೆ ನಡೆದಿತ್ತು. ಬಾಲಕಿಗೆ ಮೂವರು ದುಷ್ಕರ್ಮಿಗಳು ಆಕೆಯ ಸ್ನೇಹಿತನನ್ನು ಥಳಿಸಿ ನಂತರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

Facebook Comments

Sri Raghav

Admin