ಬೆಂಗಳೂರಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Suicide-Hang-Girl

ಬೆಂಗಳೂರು, ಜ.6- ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಕಾರಣಗಳಿಂದಾಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಾಲಕ್ಷ್ಮಿ ಲೇ ಔಟ್:
ಖಾಸಗಿ ಕಂಪೆನಿಯೊಂದರಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿದ್ದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುರುಬರ ಹಳ್ಳಿಯ ಜೆಸಿ ನಗರ, 16ನೆ ಮುಖ್ಯ ರಸ್ತೆ ನಿವಾಸಿ ರಾಜೇಶ್ (25) ಆತ್ಮಹತ್ಯೆಗೆ ಶರಣಾದ ಯುವಕ. ವೈಯಕ್ತಿಕ ಕಾರಣಗಳಿಂದಾಗಿ ಹಲವು ದಿನಗಳಿಂದ ಯಾರೊಂದಿಗೂ ಹೆಚ್ಚಾಗಿ ಮಾತನಾಡುತ್ತಿರಲಿಲ್ಲ ಎನ್ನಲಾಗಿದ್ದು, ರಾತ್ರಿ ಎಲ್ಲರೂ ಮುಗಿದ ನಂತರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಹಾಲಕ್ಷ್ಮಿ ಲೇ ಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಹದೇವಪುರ:
ಯುವತಿಯೊಬ್ಬಳು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಆಂಧ್ರಪ್ರದೇಶದ ವೀಣಾ (21) ಆತ್ಮಹತ್ಯೆಗೆ ಶರಣಾದ ಯುವತಿ. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೀಣಾ ಲಕ್ಷ್ಮೀ ಸಾಗರ ಲೇ ಔಟ್‍ನ ಮೊದಲನೆ ಮುಖ್ಯ ರಸ್ತೆ ಸರ್ಕಾರಿ ಶಾಲೆ ಸ ಮೀಪದ ಮನೆಯಲ್ಲಿ ವಾಸವಾಗಿದ್ದರು. ವೈಯಕ್ತಿಕ ಕಾರಣದಿಂದಾಗಿ ನೊಂದಿದ್ದ ವೀಣಾ ರಾತ್ರಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದ ಮಹದೇವಪರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin