ಸೈಕಲ್‍ ನಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದು ಸಾವು

Accident--01

ಬಳ್ಳಾರಿ, ಜ.6- ಸೈಕಲ್‍ಗೆ ಬಸ್ ಡಿಕ್ಕಿ ಹೊಡೆದು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಕಾಶ್ (14) ಮೃತಪಟ್ಟಿರುವ ವಿದ್ಯಾರ್ಥಿ. ಆಕಾಶ್ ಶಾಲೆಗೆ ಸೈಕಲ್‍ನಲ್ಲಿ ಹೊಗುತ್ತಿದ್ದ. ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿ ಬಳಿ ವೇಗವಾಗಿ ಬಂದ ಬಸ್ ಸೈಕಲ್‍ಗೆ ಡಿಕ್ಕಿ ಹೊಡೆದಿದೆ. ಸೈಕಲ್ ಬಸ್‍ಗೆ ಸಿಲುಕಿದೆ. ವಿಷಯ ತಿಳಿಯುತ್ತಿದ್ದಂತೆ ನೂರಾರು ಮಂದಿ ದಾವಿಸಿ ರಸ್ತೆ ತಡೆ ಮಾಡಿ ಶವ ಇಟ್ಟು ಪ್ರತಿಭಟನೆ ನಡೆಸಿದರು. ಬಳ್ಳಾರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Facebook Comments

Sri Raghav

Admin