ಮಂಗಳೂರಿನಲ್ಲಿ ಶಾಂತಿ ಕಾಪಾಡಲು ಗೃಹ ಸಚಿವ ರಾಮಲಿಂಗಾರೆಡ್ಡಿ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy--01

ಬೆಂಗಳೂರು, ಜ.7-ಮಂಗಳೂರಿನಲ್ಲಿ ಎಲ್ಲ ರಾಜಕೀಯ ಪಕ್ಷದವರು ಮತ್ತು ವಿವಿಧ ಸಂಘಟನೆಗಳು ಸಮಾಜದಲ್ಲಿ ಸಾಮರಸ್ಯ ಕಾಪಾಡಲು ಮುಂದಾಗಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ.   ಮಂಗಳೂರಿನ ಜನರು ಶಾಂತಿ ಬಯಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಪಕ್ಷಗಳ ಮುಖಂಡರು ಸಾಮರಸ್ಯ ಕಾಪಾಡಲು ಚಿಂತನೆ ನಡೆಸಬೇಕು.   ಹಲ್ಲೆಗೊಳಗಾಗಿದ್ದ ಬಶೀರ್ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಲು ಪೊಲೀಸರಿಗೆ ಸೂಚನೆ ನೀಡಿರುವುದಾಗಿ ರಾಮಲಿಂಗಾರೆಡ್ಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಶಾಂತಿ ಕಾಪಾಡುವ ಪ್ರಯತ್ನ ಮಾಡಲಾಗುವುದು. ಮುಂದಿನ ವಾರ ಮಂಗಳೂರಿಗೆ ಭೇಟಿ ನೀಡುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಅಧಿಕಾರಿಗಳಿಗೆ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು, ಜ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಜಿಲ್ಲಾ ಪ್ರವಾಸದಲ್ಲಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು.ಜ.೩ರಂದು ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಬಷೀರ್ ಇಂದು ಸಾವನ್ನಪ್ಪಿದ್ದು, ಇಂದೇ ಮುಖ್ಯಮಂತ್ರಿಗಳ ಕಾರ್ಯಕ್ರಮವಿದೆ. ಯಾವುದೇ ರೀತಿ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು, ಶಾಂತಿ-ಸೌಹಾರ್ದತೆ ಕಾಪಾಡಬೇಕು ಎಂದು ಹೇಳಿದರು. ಎಲ್ಲ ರಾಜಕೀಯ ಪಕ್ಷಗಳವರೂ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಮೃತರ ಅಂತ್ಯ ಸಂಸ್ಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ನಾನು ಮುಂದಿನ ವಾರ ಮಂಗಳೂರಿಗೆ ಭೇಟಿ ನೀಡಿ ಎರಡೂ ಸಮುದಾಯದವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸುತ್ತೇನೆ ಎಂದು ಅವರು ಹೇಳಿದರು.

Facebook Comments

Sri Raghav

Admin