ಸಾವಿನಲ್ಲಿ ರಾಜಕಾರಣ ಮಾಡಬಾರದು : ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha-CM--01

ಮಂಗಳೂರು, ಜ.7-ಸಾವಿನ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಮೃತಪಟ್ಟಾಗ ಸಾಂತ್ವನ ಹೇಳಬೇಕೆ ಹೊರತು ಶವದ ಮೇಲೆ ರಾಜಕಾರಣ ಮಾಡಬಾರದು ಎಂದು ಹೇಳಿದರು. ದ್ವೇಷದ ರಾಜಕಾರಣಕ್ಕೆ ಕೊನೆ ಎಂಬುದು ಇಲ್ಲ. ಧಾರ್ಮಿಕ ಭಾವನೆಗಳನ್ನು ಕೆರಳಿಸುವುದರಿಂದ ಸಮಾಜಕ್ಕೆ ಹಾನಿಯಾಗುತ್ತದೆ ಎಂದರು.

ಬಶೀರ್ ಮೇಲಿನ ಹಲ್ಲೆ ಹಾಗೂ ದೀಪಕ್ ರಾವ್ ಹತ್ಯೆ ಪ್ರಕರಣಗಳನ್ನು ಪಕ್ಷಾತೀತವಾಗಿ ಖಂಡಿಸಬೇಕು. ಯಾವುದೇ ರಾಜಕೀಯ ಪಕ್ಷಗಳಾಗಲಿ, ಸಂಘಟನೆಗಳಾಗಲಿ ಘರ್ಷಣೆಗೆ ಪ್ರಚೋದಿಸಬಾರದು. ಸಮಾಜದಲ್ಲಿ ಶಾಂತಿ-ಸಾಮರಸ್ಯ ಕಾಪಾಡಲು ಪ್ರಯತ್ನಿಸಬೇಕೆಂದು ಮನವಿ ಮಾಡಿದ್ದಾರೆ. ಬಿಜೆಪಿಯವರು ಒಬ್ಬರು ಸತ್ತ ತಕ್ಷಣ ಪ್ರತಿಭಟನೆ ಮಾಡುತ್ತಾರೆ. ಅವರಿಗೆ ಮನುಷತ್ವ ಇದ್ದರೆ ಈಗಲೂ ಪ್ರತಿಭಟನೆ ಹಮ್ಮಿಕೊಳ್ಳಬೇಕಲ್ಲವೇ ಎಂದು ಟೀಕಿಸಿದರು.

Facebook Comments

Sri Raghav

Admin