ದಲಿತ ಪರ ಸಂಘಟನೆಗಳು ಕರೆ ನೀಡಿದ್ದ ಹುಬ್ಬಳ್ಳಿ-ಧಾರವಾಡ ಬಂದ್‍ಗೆ ಉತ್ತಮ ಪ್ರತಿಕ್ರಿಯೆ

ಈ ಸುದ್ದಿಯನ್ನು ಶೇರ್ ಮಾಡಿ

Bandh--02

ಹುಬ್ಬಳ್ಳಿ, ಜ.8-ದಲಿತ ಬಾಲಕಿ ಮೇಲೆ ಅತ್ಯಾಚಾರ, ಸಂವಿಧಾನದ ಬದಲಾವಣೆ ಕುರಿತು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಹೇಳಿಕೆ, ಮಹಾರಾಷ್ಟ್ರದ ಕೋರೆಗಾಂವ್‍ನಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳು ಕರೆ ನೀಡಿದ್ದ ಹುಬ್ಬಳ್ಳಿ-ಧಾರವಾಡ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಲಕಿ ದಾನಮ್ಮ ಅತ್ಯಾಚಾರ, ಹತ್ಯೆ ಹಾಗೂ ಕೋರೆಗಾಂವ್‍ನಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಇಂದು ಬೆಳಗ್ಗೆಯಿಂದಲೇ ಬಂದ್‍ನಲ್ಲಿ ಪಾಲ್ಗೊಂಡು ಟಯರ್‍ಗಳಿಗೆ ಬೆಂಕಿ ಹಚ್ಚಿ ತಮ್ಮ ಅಸಮಾಧಾನ ಹೊರಹಾಕಿದರು.

ವಿವಿಧ ದಲಿತ ಸಂಘಟನೆ ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ದಲಿತ ವಿರೋದಿ ಧೋರಣೆಯನ್ನು ಖಂಡಿಸಿದರು. ನಗರದ ಹಳೇ ಬಸ್ ನಿಲ್ದಾಣದ ಟಿಕೆಟ್ ಕೌಂಟರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಕ್ಯಾಷ್ ಕೌಂಟರ್, ಕಿಟಕಿ ಗಾಜುಗಳನ್ನು ಜಖಂಗೊಳಿಸಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲ. ಖಾಸಗಿ ಶಾಲಾ-ಕಾಲೇಜುಗಳವರು ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಂದ್ ಪರಿಣಾಮ ಸಾರ್ವಜನಿಕರು, ವಿದ್ಯಾರ್ಥಿಗಳು ಬಸ್‍ಗಳಿಲ್ಲದೆ ಪರದಾಡುವಂತಾಯಿತು. ಬಸ್ ಸಂಚಾರ ಏಕಾಏಕಿ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಬಸ್‍ಗಳಿಲ್ಲದೆ ತೊಂದರೆ ಅನುಭವಿಸಿದರು.

Facebook Comments

Sri Raghav

Admin