ಕೈಲಾಶ್ ಬಾರ್‍ ಅಗ್ನಿ ಅವಘಡಕ್ಕೆ ಶಾರ್ಟ್ ಸಕ್ರ್ಯೂಟ್ ಕಾರಣ

ಈ ಸುದ್ದಿಯನ್ನು ಶೇರ್ ಮಾಡಿ

Bangalore-Fire--01
ಬೆಂಗಳೂರು, ಜ.9- ಕಲಾಸಿಪಾಳ್ಯ ತರಕಾರಿ ಮಾರ್ಕೆಟ್ ಬಳಿಯ ಕೈಲಾಸ್ ಬಾರ್ ಅಂಡ್ ರೆಸ್ಟೋರೆಂಟ್‍ನಲ್ಲಿ ಅಗ್ನಿ ಅವಘಡಕ್ಕೆ ಶಾರ್ಟ್ ಸಕ್ರ್ಯೂಟ್ ಕಾರಣವೆಂಬುದು ಇದುವರೆಗೂ ನಡೆಸಿದ ತನಿಖೆಯಿಂದ ಕಂಡುಬಂದಿದೆ. ಘಟನಾ ಸ್ಥಳಕ್ಕೆ ಇಂದೂ ಸಹ ವಿಧಿ-ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ, ಎಲೆಕ್ಟ್ರೋ ಸಿಬ್ಬಂದಿ, ಬಿಬಿಎಂಪಿ ಅಧಿಕಾರಿಗಳು, ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಧಿ-ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಮತ್ತು ಎಲೆಕ್ಟ್ರೋ ಎಂಜಿನಿಯರ್ಸ್, ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ಪೂರ್ಣ ವರದಿ ನೀಡಿದ ನಂತರ ನಿಖರ ಕಾರಣ ತಿಳಿದುಬರಲಿದೆ. ಇನ್ನೂ ಪೂರ್ಣ ವರದಿ ಬಂದಿಲ್ಲ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ದುರ್ಘಟನೆಯಲ್ಲಿ ಮೃತಪಟ್ಟಿದ್ದ ಐದೂ ಮಂದಿಯ ಶವಗಳನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಘಟನೆ ಸಂಬಂಧ ಬಾರ್ ನಡೆಸುತ್ತಿದ್ದ ಪ್ರಕಾಶ್ ಹಾಗೂ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಸೋಮಶೇಖರ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಬಾರ್ ಲೈಸೆನ್ಸ್‍ದಾರರಾದ ದಯಾಶಂಕರ್ ಅವರ ಆರೋಗ್ಯ ಸರಿಯಿಲ್ಲ. ಅವರ ಮೆಲೆ ಯಾವ ರೀತಿ ಕ್ರಮ ಕೈಗೊಳ್ಳುವ ಬಗ್ಗೆಯೂ ಆಲೋಚಿಸುತ್ತಿದ್ದೇವೆ ಎಂದು ಹಿರಿಯ ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Facebook Comments

Sri Raghav

Admin