ಟಾಟಾ ಏಸ್ ವಾಹನ ಮಗುಚಿ ಬಿದ್ದು ಮೂವರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--02

ಚಿತ್ರದುರ್ಗ, ಜ.9- ಚಾಲಕರ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಮಗುಚಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕುಪ್ಪೆಲೂರು ಗ್ರಾಮದ ನಿವಾಸಿ ಹನುಮಂತಪ್ಪ , ರೇಣುಕಾ , ಚಂದ್ರಣ್ಣ ಸಾವನ್ನಪ್ಪಿರುವ ಮೃತ ದುರ್ದೈವಿಗಳು. ತಾಲ್ಲೂಕಿನ ನೇರ್ಲಹಳ್ಳಿ ಕ್ರಾಸ್‍ನ ಮಾರಮ್ಮ ದೇವಾಲಯದ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದು , ಸ್ಥಳೀಯರು ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin