ನಾಳೆ ರಾಜ್ಯದ ಪ್ರಕಾಶಕರು, ಪುಸ್ತಕ ವ್ಯಾಪಾರಿಗಳ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Protest--00002

ಬೆಂಗಳೂರು, ಜ.9-ಶಾಲಾ-ಕಾಲೇಜುಗಳಲ್ಲಿ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ವಿರೋಧಿಸಿ ಹಾಗೂ ಜೆರಾಕ್ಸ್ ಹಾವಳಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಾಳೆ ಬೆಳಗ್ಗೆ ರಾಜ್ಯದ ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.  ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಕಾಶಕರ ಮತ್ತು ಪುಸ್ತಕ ವ್ಯಾಪಾರಿಗಳ ಸಂಘ ನಾಳೆ ಬೆಳಗ್ಗೆ 10.30ರಿಂದ 12.30ರವರೆಗೆ ಬೆಂಗಳೂರಿನ ಟೌನ್‍ಹಾಲ್ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿದೆ.   ಶಾಲಾ-ಕಾಲೇಜುಗಳ ಪಠ್ಯಪುಸ್ತಕಗಳನ್ನು ಜೆರಾಕ್ಸ್ ಮಾಡುತ್ತಿರುವ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಇದರಿಂದ ಪುಸ್ತಕ ಉದ್ಯಮಕ್ಕೆ ದೊಡ್ಡ ಮಟ್ಟದಲ್ಲಿ ಹೊಡೆತ ಬಿದ್ದಿದೆ ಎಂದು ಸಂಘದ ಪದಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಪುಸ್ತಕಗಳು ಮತ್ತು ಇತರ ಲೇಖನ ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳ ವಹಿವಾಟಿಗೆ ಧಕ್ಕೆಯಾಗಿದೆ ಎಂದು ಸಂಘ ಆರೋಪಿಸಿದೆ.   ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳ ಹಿತ ರಕ್ಷಿಸಬೇಕು ಎಂದು ಸಂಘ ಮನವಿ ಮಾಡಿದೆ. ನಗರದ ಟೌನ್‍ಹಾಲ್ ಬಳಿ ಪ್ರತಿಭಟನೆ ನಡೆಸುವ ಜೊತೆಗೆ ನಾಳೆ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಪುಸಕ್ತ ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

Facebook Comments

Sri Raghav

Admin