ಬಿಜೆಪಿ ವಿರುದ್ಧ ಹಿಂದುತ್ವದ ಕಾರ್ಡ್ ವಿತರಣೆಗೆ ಕಾಂಗ್ರೆಸ್ ಸಜ್ಜು

ಈ ಸುದ್ದಿಯನ್ನು ಶೇರ್ ಮಾಡಿ

BJP-Vs-Congress--02

ಬೆಂಗಳೂರು, ಜ.9- ಬಿಜೆಪಿ ವಿರುದ್ಧ ಹಿಂದುತ್ವದ ಕಾರ್ಡ್ ಬಳಸಲು ನಿರ್ಧರಿಸಿರುವ ಕಾಂಗ್ರೆಸ್ ಫೆಬ್ರವರಿ ಮೊದಲ ವಾರದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿದ್ಯಾರ್ಥಿಗಳ ಸಮಾವೇಶ ನಡೆಸಲು ಸರ್ಕಾರ ಮುಂದಾಗಿದೆ. ಸರ್ಕಾರದ ವತಿಯಿಂದಲೇ ಜ.12ರಿಂದ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಯುವ ಸಪ್ತಾಹ ನಡೆಸಲು ಸರ್ಕಾರ ಚಿಂತನೆ ನಡೆಸಿದ್ದು, ಈ ಮೂಲಕ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಸಜ್ಜಾಗಿದೆ.
ವಿವೇಕಾನಂದ ಯುವ ಸಪ್ತಾಹದ ಅಂಗವಾಗಿ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸುಮಾರು 75,000 ವಿದ್ಯಾರ್ಥಿಗಳನ್ನು ಸಂಘಟಿಸುವ ನಿರೀಕ್ಷೆ ಇದೆ. ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Facebook Comments

Sri Raghav

Admin