ಯೋಧರ ಮೇಲೆ ದಾಳಿ ಮಾಡಿದ ಇಬ್ಬರು ಉಗ್ರರು ಎನ್‍ಕೌಂಟರ್‍ ನಲ್ಲಿ ಫಿನಿಷ್

Encounter--01
ಶ್ರೀನಗರ, ಜ.9-ಸೇನಾಪಡೆ ಮೇಲೆ ಉಗ್ರರ ದಾಳಿ ನಂತರ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾದ ಘಟನೆ ಇಂದು ಮುಂಜಾನೆ ಕಣಿವೆ ರಾಜ್ಯ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದಿದೆ. ಅನಂತನಾಗ್ ಜಿಲ್ಲೆಯ ಕೊಕೆರ್‍ನಾಗ್‍ನ ಲಾರ್ನೂ ಪ್ರದೇಶದಲ್ಲಿ ಸೇನಾ ಪಡೆ ಮೇಲೆ ಉಗ್ರರು ದಾಳಿ ನಡೆಸಿದರು. ತಕ್ಷಣ ಎಚ್ಚೆತ್ತುಕೊಂಡ ಯೋಧರು ಗುಂಡು ಹಾರಿಸಿದಾಗ ಎನ್‍ಕೌಂಟರ್ ನಡೆಯಿತು. ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ.

Facebook Comments

Sri Raghav

Admin