ರಾಜಕಾಲುವೆಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Rajakaluve-01

ಬೆಂಗಳೂರು, ಜ.9- ರಾಜಕಾಲುವೆಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ. ಮೃತ ಮಗುವನ್ನು ತನುಶ್ರೀ ಎಂದು ಗುರುತಿಸಲಾಗಿದೆ. ಮಗುವಿನ ತಂದೆ ಶವಣ್ಣ ಹಾಗೂ ತಾಯಿ ಗಾರೆ ಕೆಲಸ ಮಾಡುತ್ತಿದ್ದು, ಇವರು ಮೂಲತಃ ಕಲಬುರಗಿಯವರು. ದೊಡ್ಡಬೊಮ್ಮಸಂದ್ರದ ರಾಜಕಾಲುವೆ ಪಕ್ಕ ಟೆಂಟ್ ಹಾಕಿಕೊಂಡು ವಾಸ ಮಾಡುತ್ತಿದ್ದಾರೆ. ಬೆಳಗ್ಗೆ ಮನೆ ಮುಂದೆ ಆಟವಾಡುತ್ತಿದ್ದ ಮಗು ರಾಜಕಾಲುವೆ ಬಳಿ ಬಂದು ಆಯತಪ್ಪಿ ಕಾಲುವೆಗೆ ಬಿದ್ದು ಮೃತಪಟ್ಟಿದೆ.

ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. .ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮಗುವಿನ ಶವ ಪರೀಕ್ಷೆ ನಡೆಸಲಾಗಿದೆ. ಮೇಯರ್ ಸಂಪತ್‍ರಾಜ್ ಹಾಗೂ ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ ಭೇಟಿ ನೀಡಿ ಪರಿಶೀಲಿಸಿ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದರು.

Facebook Comments

Sri Raghav

Admin