ಕಲಬುರಗಿ ಹತ್ಯೆ : ಸಿಬಿಐ,ಎನ್‍ಐಎ ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರಗಳಿಗೆ ಸುಪ್ರೀಂ ನೋಟೀಸ್

ಈ ಸುದ್ದಿಯನ್ನು ಶೇರ್ ಮಾಡಿ

kalburgi

ನವದೆಹಲಿ, ಜ.10-ಖ್ಯಾತ ವಿಚಾರವಾದಿ ಪ್ರೊ.ಎಂ.ಎಂ.ಕಲಬುರಗಿ ಹತ್ಯೆ ಕುರಿತು ವಿಶೇಷ ತನಿಖಾ ತಂಡ(ಎಸ್‍ಐಟಿ)ದಿಂದ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯೊಂದರ ಸಂಬಂಧ ಸುಪ್ರೀಂಕೋರ್ಟ್ ಇಂದು ಎನ್‍ಐಎ, ಸಿಬಿಐ ತನಿಖಾ ಸಂಸ್ಥೆಗಳು ಹಾಗೂ ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನು ಒಳಗೊಂಡ ಪೀಠವು ಆರು ವಾರಗಳಲ್ಲಿ ಈ ಬಗ್ಗೆ ಪ್ರತ್ಯುತ್ತರ ನೀಡುವಂತೆ ಸೂಚಿಸಿದೆ.

ಡಾ. ಕಲಬುರಗಿ ಅವರ ಪತ್ನಿ ಉಮಾದೇವಿ ಕಲಬುರಗಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ತನಿಖಾ ಸಂಸ್ಥೆಗಳು ಮತ್ತು ಎರಡೂ ಸರ್ಕಾರಗಳಿಗೆ ಈ ಸಂಬಂಧ ನೋಟಿಸ್‍ಗಳನ್ನು ಜಾರಿಗೊಳಿಸಿ ಒಂದೂವರೆ ತಿಂಗಳ ಒಳಗೆ ಪ್ರತ್ಯುತ್ತರ ನೀಡುವಂತೆ ನಿರ್ದೇಶನ ನೀಡಿದೆ. ಹಿರಿಯ ವಕೀಲ ಕೃಷ್ಣಕುಮಾರ್ ಅವರ ಮೂಲಕ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಉಮಾದೇವಿ ಅವರು, ತಮ್ಮ ಪತಿ ಕೊಲೆ ತನಿಖೆಯಲ್ಲಿ ಈವರೆಗೆ ಯಾವುದೇ ಗಮನಾರ್ಹ ಪ್ರಗತಿ ಕಂಡುಬಂದಿಲ್ಲ ಎಂದು ದೂರಿದ್ದರು.

ಹಂಪಿ ವಿಶ್ವವಿದ್ಯಾಲದಯ ಮಾಜಿ ಉಪ ಕುಲಪತಿಯಾಗಿದ್ದ ಡಾ.ಕಲಬುರಗಿ ಅವರು ಖ್ಯಾತ ಸಂಶೋಧಕರಾಗಿದ್ದರು. ಆಗಸ್ಟ್ 30, 2015ರಲ್ಲಿ ಧಾರವಾಡದ ಕಲ್ಯಾಣ ನಗರದ ಅವರ ಮನೆ ಮುಂದೆ ದುಷ್ಕರ್ಮಿಗಳು ಗುಂಡು ಹಾರಿಸಿ ಅವರನ್ನು ಕೊಲೆಗೈದು ಪರಾರಿಯಾಗಿದ್ದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕøತರೂ ಆಗಿದ್ದ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ್ದರು.ಎಸ್ಪಿ ನಾಗರಾಜ್ ಮಾರ್ಗದರ್ಶನದಲ್ಲಿ ಡಿಸಿಪಿ ವಿಭಾಗದ ಇನ್ಸ್‍ಪೆಕ್ಟರ್ ರಾಘವೇಂದ್ರ, ಮಲ್ಲೇಶ್, ಸೈಮನ್, ಮಂಜುನಾಥ್, ಚಂದ್ರಶೇಖರ್,ವಿಜಯ್‍ಕುಮಾರ್, ಕಾಂತರಾಜು ಅವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಸಿಸಿಟಿವಿ ಫುಟೇಜ್ ಹಾಗೂ ಮೊಬೈಲ್ ಟವರ್ ಆಧಾರದ ಮೇಲೆ ಈ ವಿಶೇಷ ತಂಡ ತಮಿಳುನಾಡಿನ ಪೆರಂಬದೂರು, ರಾಜಸ್ಥಾನ, ಬೆಂಗಳೂರಿ ನಲ್ಲಿ ಕಾರ್ಯಾ ಚರಣೆ ನಡೆಸಿ ನಿಖರ ಮಾಹಿತಿ ಮೇರೆಗೆ ದಯಾನಂದ ಸರ್ವೆಯನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಬಂಧಿತನಿಂದ 57 ಬಾಕ್ಸ್ ಸಿಗರೇಟ್ ಹಾಗೂ 27 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಈತನನ್ನು ನಗರಕ್ಕೆ ಕರೆತಂದು ವಿಚಾರಣೆ ನಡೆಸಿದಾಗ ಈತನ ಹಿಂದೆ ದೊಡ್ಡ ಜಾಲವೇ ಇರುವುದು ಪತ್ತೆಯಾಗಿದೆ. ದಯಾನಂದ ರಾಜಸ್ಥಾನ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ವಾಸವಿದ್ದು, ಸಿಗರೇಟ್ ಗೋದಾಮುಗಳನ್ನು ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಈ ವಿಶೇಷ ತಂಡದ ಕಾರ್ಯವೈಖರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

Facebook Comments

Sri Raghav

Admin