ಕ್ರೂರಿ ಕಿಮ್ ಜೊತೆ ಮಾತುಕತೆಗೆ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಒಲವು

ಈ ಸುದ್ದಿಯನ್ನು ಶೇರ್ ಮಾಡಿ

Kim--02

ಸಿಯೋಲ್, ಜ.10-ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜಾಯಿ-ಇನ್, ಅಣ್ವಸ್ತ್ರ ಶಕ್ತಿಶಾಲಿ ರಾಷ್ಟ್ರ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಅವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕೊರಿಯಾದಲ್ಲಿ ನಡೆಯುವ ಚಳಿಗಾಲದ ಒಲಿಂಪಿಕ್ ಕ್ರೀಡಾಕೂಟಕ್ಕೆ ತನ್ನ ಕ್ರೀಡಾಪಟುಗಳನ್ನು ಕಳುಹಿಸಲು ಉತ್ತರ ಕೊರಿಯ ಒಪ್ಪಿರುವುದನ್ನು ಅಂತಾರಾಷ್ಟ್ರೀಯ ಸಮುದಾಯ ಸ್ವಾಗತಿಸಿದ ಬೆನ್ನಲ್ಲೇ ದಕ್ಷಿಣ ಕೊರಿಯಾ ಈ ಬಯಕೆ ವ್ಯಕ್ತಪಡಿಸಿರುವುದು ಮತ್ತೊಂದು ಬೆಳವಣಿಗೆಯಾಗಿದೆ.

ರಾಜಧಾನಿ ಸಿಯೋಲ್‍ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮೂನ್, ಉತ್ತರ ಕೊರಿಯಾ ನಾಯಕ ಕಿಮ್ ಜೊತೆ ಮಾತುಕತೆಗೆ ನಾವು ಬಯಸಿದ್ದೇವೆ. ಇದೊಂದು ಆರಂಭ ಮಾತ್ರ. ಅಣ್ವಸ್ತ್ರ ನಿಶ್ಯಸ್ತ್ರೀಕರಣಗೊಳ್ಳುವಂತೆ ಉತ್ತರ ಕೊರಿಯ ಮನವೊಲಿಸಲು ಮಾತುಕತೆ ನಡೆಸುವುದು ನಮ್ಮ ಮುಂದಿನ ಹೆಜ್ಜೆ. ಅದನ್ನು ನಾವು ಖಂಡಿತ ಕೈಗೊಳ್ಳುತ್ತೇವೆ ಎಂದರು. 1988ರಲ್ಲಿ ಸಿಯೋಲ್‍ನಲ್ಲಿ ನಡೆದ ಬೇಸಿಗೆ ಒಲಿಂಪಿಕ್ ಕ್ರೀಡಾಕೂಟವನ್ನು ಉತ್ತರ ಕೊರಿಯಾ ಬಹಿಷ್ಕರಿಸಿತ್ತು. ಆದರೆ ನಿನ್ನೆ ಎರಡೂ ದೇಶಗಳ ನಡುವೆ ಈ ನಿಟ್ಟಿನಲ್ಲಿ ಒಪ್ಪಂದ ಏರ್ಪಟ್ಟಿರುವುದು ಮಹತ್ವದ ಬೆಳವಣಿಗೆಯಾಗಿದೆ.

Facebook Comments

Sri Raghav

Admin