ದಾನಮ್ಮ ಅತ್ಯಾಚಾರ, ಭೀಮಾ-ಕೋರೆಗಾಂವ್ ಹಿಂಸಾಚಾರ ಖಂಡಿಸಿ ಕೊಪ್ಪಳ ಬಂದ್ ಯಶಸ್ವಿ

ಈ ಸುದ್ದಿಯನ್ನು ಶೇರ್ ಮಾಡಿ

Koppala--02

ಕೊಪ್ಪಳ,ಜ.10-ವಿಜಯಪುರ ಜಿಲ್ಲೆಯ ಬಾಲಕಿ ದಾನಮ್ಮ ಮೇಲಿನ ಅತ್ಯಾಚಾರ ಹಾಗೂ ಭೀಮಾ-ಕೋರೆಗಾಂವ್ ಹಿಂಸಾಚಾರ ಖಂಡಿಸಿ, ವಿವಿಧ ದಲಿತ ಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಇಂದು ಸಂಪೂರ್ಣ ಯಶಸ್ವಿಯಾಯಿತು. ಬೆಳಗ್ಗೆಯಿಂದಲೇ ವ್ಯಾಪಾರಸ್ಥರು, ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ, ಬಂದ್‍ಗೆ ಸಾಥ್ ನೀಡಿದರು. ಸರ್ಕಾರಿ ವಾಹನ ಸಂಪೂರ್ಣ ಸ್ಥಗಿತವಾಗಿದ್ದು, ಆಟೋ ಚಾಲಕರು ಸಹ ಬಂದ್‍ಗೆ ಸಾಥ್ ನೀಡಿದರು.

ಪ್ರತಿಭಟನಾಕಾರರು ನಗರದ ಪ್ರಮುಖ ರಸ್ತೆಗಳಲ್ಲಿ ಟಯರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ದೂರದೂರಿನ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ನಂತರ ನಡೆದ ಸಭೆಯಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರುಗಳು, ಬಾಲಕಿ ದಾನಮ್ಮಳ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಅದರಂತೆ ಮಹಾರಾಷ್ಟ್ರದಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಭಾಗಿಯಾ ದವರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಹಲ್ಲೆಗಳು ಹಾಗೂ ಅದರ ಹಿಂದಿರುವ ಹುನ್ನಾರ ಗಳ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಒತ್ತಾಯಿಸಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Facebook Comments

Sri Raghav

Admin