ಮತ್ತೊಮ್ಮೆ ಟ್ರಂಪ್ ಭೇಟಿ ಮಾಡಲಿದ್ದಾರೆ ಮೋದಿ, ಯಾವಾಗ…ಎಲ್ಲಿ ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

Trump
ನವದೆಹಲಿ, ಜ.10-ದಾವೋಸ್‍ನಲ್ಲಿ ನಡೆಯುವ ವಿಶ್ವ ಆರ್ಥಿಕ ವೇದಿಕೆ(ಡಬ್ಲ್ಯುಇಎಫ್) ಸಮಾವೇಶ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಮಾಡಲಿದ್ದಾರೆ. ದಾವೋಸ್‍ನಲ್ಲಿ ನಡೆಯಲಿರುವ ಜಾಗತಿಕ ಮಟ್ಟದ ನಾಯಕರ ಸಮಾವೇಶದಲ್ಲಿ ಭಾಗವಹಿಸುತ್ತಿರುವುದು ಮೋದಿ ಮತ್ತು ಟ್ರಂಪ್ ಇಬ್ಬರಿಗೂ ಮಹತ್ವದ್ದಾಗಿದೆ. ಏಕೆಂದರೆ 18 ವರ್ಷಗಳ ಅವಧಿಯಲ್ಲಿ ಅಮೆರಿಕದ ಅಧ್ಯಕ್ಷರೊಬ್ಬರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. 1997ರ ನಂತರ ಭಾರತದ ಪ್ರಧಾನಿಯೊಬ್ಬರು ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳುತ್ತಿರುವುದ ಸಹ ಇದೇ ಮೊದಲು.

ಈ ತಿಂಗಳ ಮೂರನೇ ವಾರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಟ್ರಂಪ್ ಭಾಗವಹಿಸುವಿಕೆಯನ್ನು ಶ್ವೇತಭವನ ಖಚಿತಪಡಿಸಿದೆ. ಪ್ರಧಾನಿ ಮೋದಿ ಅವರು ಸರ್ವ ಸದಸ್ಯ ರಾಷ್ಟ್ರಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಕೇಂದ್ರ ವಾಣಿಜ್ಯ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ.

Facebook Comments

Sri Raghav

Admin