ಮೈಸೂರಲ್ಲೂ ಇಂದಿರಾ ಕ್ಯಾಂಟೀನ್, ಯಾವಾಗ ಓಪನ್ ಆಗುತ್ತೆ ಗೊತ್ತೇ.?

ಈ ಸುದ್ದಿಯನ್ನು ಶೇರ್ ಮಾಡಿ

Indira-Canteen
ಮೈಸೂರು ,ಜ.10- ಮೊಟ್ಟ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ ಜನಮೆಚ್ಚುಗೆ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಕ್ಷೇತ್ರದಲ್ಲೂ ಇಂದಿರಾ ಕ್ಯಾಂಟೀನ್ ಆರಂಭಿಸಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದ ವೇಳೆ ಎಲ್ಲಾ ಜಿಲ್ಲೆಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಘೋಷಿಸಿದ್ದರು. ಅದರಂತೆ ಇದೀಗ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್‍ನನ್ನು ಜ.12ರಂದು ಉದ್ಘಾಟಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಮೇಯರ್ ರವಿಕುಮಾರ್, ಪಾಲಿಕೆ ಆಯುಕ್ತ ಜಗದೀಶ್ ಅವರು ನಗರದ ಹಲವೆಡೆ ಆರಂಭಗೊಳ್ಳಲಿರುವ ಇಂದಿರಾ ಕ್ಯಾಂಟೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಎಂ ಅವರು ಶುಕ್ರವಾರದಂದು ಮೈಸೂರು ಅರಮನೆ ಸಮೀಪದಲ್ಲಿರುವ ನಾಡ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಲಿದ್ದಾರೆ. ಹಾಗೇಯೇ ಲಲಿತ ಮಹಲ್ ಹೆಲಿಪ್ಯಾಡ್, ಕುರುಬರಹಳ್ಳಿ, ಕೆ.ಆರ್.ಆಸ್ಪತ್ರೆ ಆವರಣ, ಎನ್.ಆರ್.ಮೊಹಲ್ಲಾ, ಬನ್ನಿ ಮಂಟಪ ಸೇರಿದಂತೆ ಇನ್ನು ಹಲವೆಡೆ ಇಂದಿರಾ ಕ್ಯಾಂಟೀನ್ ಶುಕ್ರವಾರದಿಂದ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮೇಯರ್ ಮತ್ತು ಪಾಲಿಕೆ ಆಯುಕ್ತರು ಹಲವು ಇಂದಿರಾ ಕ್ಯಾಂಟೀನ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

Facebook Comments

Sri Raghav

Admin