ಕ್ಯಾಲಿಫೋರ್ನಿಯಾದಲ್ಲಿ ಭಾರಿ ಮಳೆ ಮತ್ತು ಭೂಕುಸಿತಕ್ಕೆ 16 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Rain--10

ಲಾಸ್ ಏಂಜೆಲಿಸ್, ಜ.11-ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದ ಫೆಸಿಫಿಕ್ ಕರಾವಳಿಯ ಸಾಂಟಾ ಬಾರ್ಬರಾದಲ್ಲಿ ನಿನ್ನೆ ಭಾರೀ ಮಳೆ ಮತ್ತು ಭೂಕುಸಿತದಲ್ಲಿ 16 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ. ಈ ನೈಸರ್ಗಿಕ ವಿಕೋಪದಲ್ಲಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಭೂಕುಸಿತ ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದ ನಂತರ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಇಲ್ಲಿನ ನಿವಾಸಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ ಇದನ್ನು ಲೆಕ್ಕಿಸಿದೆ ಕೆಲವರು ಅಲ್ಲೇ ಉಳಿದಿದ್ದರು. ಮಂಗಳವಾರ ಮುನ್ಸೂಚನೆಯಂತೆ ಭಾರೀ ಮಳೆ ಸುರಿತು ನಂತರ ಭೂಕಂಪ ಸಂಭವಿಸಿತು. ದುರಂತ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ.

Facebook Comments

Sri Raghav

Admin