ಚಿಕ್ಕಪೇಟೆ ಕ್ಷೇತ್ರದಿಂದ ಜೆಡಿಎಸ್‍ ಅಭ್ಯರ್ಥಿಯಾಗಿ ಪಿ.ಜಿ.ಆರ್.ಸಿಂಧ್ಯಾ ಕಣಕ್ಕೆ..?

ಈ ಸುದ್ದಿಯನ್ನು ಶೇರ್ ಮಾಡಿ
Sindhya--023
ಸಂಗ್ರಹ ಚಿತ್ರ

ಬೆಂಗಳೂರು, ಜ.11- ನಗರದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಹಿನ್ನೆಲೆಯಲ್ಲಿ ರಣತಂತ್ರ ರೂಪಿಸಿರುವ ಜೆಡಿಎಸ್ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರಕ್ಕೆ ಹಿರಿಯ ಅನುಭವಿ ರಾಜಕಾರಣಿ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಎಲ್ಲ ವರ್ಗದ ಮತದಾರರು, ವರ್ತಕರು ಇರುವ ಕ್ಷೇತ್ರವಾದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲುವು ಸಾಧ್ಯವಾಗುತ್ತದೆ ಎಂಬ ಲೆಕ್ಕಾಚಾರ ಹಾಕಿರುವ ಜೆಡಿಎಸ್, ಪಿ.ಜಿ.ಆರ್.ಸಿಂಧ್ಯಾ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಈ ಬಗ್ಗೆ ಕಾರ್ಯೋನ್ಮುಖರಾಗುವಂತೆ ಸೂಚನೆ ನೀಡಿದೆ.
ಈ ಸಂಬಂಧ ಈ ಸಂಜೆಯೊಂದಿಗೆ ಮಾತನಾಡಿದ ಪಿ.ಜಿ.ಆರ್.ಸಿಂಧ್ಯಾ ಅವರು ಟಿಕೆಟ್ ಕೊಡುವ ವಿಷಯ ಹೈಕಮಾಂಡ್‍ಗೆ ಬಿಟ್ಟದ್ದು. ಹೈಕಮಾಂಡ್ ನಿರ್ಧರಿಸಿದರೆ ನಾನು ಕಣಕ್ಕಿಳಿಯುತ್ತೇನೆ. ಒಟ್ಟಾರೆ ಜನ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತಗಳಿಂದ ರಾಜ್ಯದ ಜನ ರೋಸಿ ಹೋಗಿದ್ದಾರೆ. ಒಳ್ಳೆಯ ಆಡಳಿತ ಬಯಸಿದ್ದಾರೆ. ದೇವೇಗೌಡರ 50 ವರ್ಷದ ಅನುಭವವನ್ನು ಸದುಪಯೋಗಪಡಿಸಿಕೊಂಡು ಜೆಡಿಎಸ್ ಒಳ್ಳೆಯ ಆಡಳಿತ ನೀಡಲು ಮುಂದಾಗಿದೆ. ಜನ ಅವಕಾಶ ಕೊಟ್ಟರೆ ನಾವು ಅತ್ಯುತ್ತಮ ಆಡಳಿತ ಕೊಡುತ್ತೇವೆ ಎಂದು ಹೇಳಿದರು. ಚಿಕ್ಕಪೇಟೆ ಕ್ಷೇತ್ರದಲ್ಲಿ ಎಲ್ಲ ರೀತಿಯ, ಎಲ್ಲ ಜಾತಿಯ, ಎಲ್ಲ ವರ್ಗದ ಮತದಾರರಿದ್ದಾರೆ. ಆ ಕ್ಷೇತ್ರದಲ್ಲಿ ಜನ ಪ್ರಾದೇಶಿಕ ಪಕ್ಷಕ್ಕೆ ಬೆಂಬಲ ನೀಡುತ್ತಾರೆ ಎಂಬ ಆಶಯವಿದೆ. ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುವುದಾಗಿ ಹೇಳಿದರು.

Facebook Comments

Sri Raghav

Admin