ಜನರಲ್ಲಿ ಕೋಮು ಭಾವನೆ ಕೆರಳಿಸಿ ಅಧಿಕಾರಕ್ಕೇರಲು ಹವಣಿಸುತ್ತಿದೆ ಬಿಜೆಪಿ : ವೇಣುಗೋಪಾಲ್

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ, ಜ.11-ರಾಜ್ಯದಲ್ಲಿ ಬಿಜೆಪಿ ಜನರಲ್ಲಿ ಕೋಮು ಭಾವನೆ ಕೆರಳಿಸಿ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಬರುವ ಚುನಾವಣೆಯಲ್ಲಿ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಪಕ್ಷದ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದರು. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್ ಕೋಮುವಾದಿ ಸಂಘಟನೆ ಎಂಬುದರಲ್ಲಿ ಎರಡು ಮಾತಿಲ್ಲ. ಪಿಎಫ್‍ಐ ಸೇರಿದಂತೆ ಯಾವುದೇ ಸಂಘಟನೆ ನಿಷೇಧ ಮಾಡುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಷಯ ಎಂದು ಅವರು ಹೇಳಿದರು. ಕಾಂಗ್ರೆಸ್‍ನಲ್ಲಿ ಯಾವುದೇ ಒಡಕಿಲ್ಲ. ಪಕ್ಷದಲ್ಲಿ ಟಿಕೆಟ್ ಹಂಚಿಕೆ ವಿಚಾರ ಹೈಕಮಾಂಡ್‍ಗೆ ಬಿಟ್ಟದ್ದು. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲ ಆಕಾಂಕ್ಷಿಗಳೂ ಬದ್ಧರಾಗಿರುತ್ತಾರೆ ಎಂದು ಹೇಳಿದರು.

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ. ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಹೇಳಿದರು. ಕರಾವಳಿ ಕೊಲೆ ಪ್ರಕರಣಗಳಲ್ಲಿ ಬಿಜೆಪಿ ಮತ್ತು ಆರ್‍ಎಸ್‍ಎಸ್ ಕೈವಾಡವಿರುವುದು ಕಂಡುಬರುತ್ತದೆ ಎಂದು ಗಂಭೀರ ಆರೋಪ ಮಾಡಿದರು. ಬಿಜೆಪಿಯವರು ಅಪರಾಧ ಕೃತ್ಯಗಳನ್ನು ಪ್ರಚೋದಿಸುತ್ತಿದ್ದಾರೆ. ಜನರಲ್ಲಿ ಕೋಮು ಭಾವನೆ ಬಿತ್ತಿ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡುತ್ತಿದ್ದಾರೆ. ಇದು ನಡೆಯುವುದಿಲ್ಲ ಎಂದು ಅವರು ಹೇಳಿದರು.

Facebook Comments

Sri Raghav

Admin