ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ : ದೆಹಲಿಯಲ್ಲಿ 4 ದಿನಗಳಲ್ಲಿ 6,941 ಪ್ರಕರಣ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Smoking--02
ನವದೆಹಲಿ, ಜ.11-ರಾಜಧಾನಿ ದೆಹಲಿಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ ವಿರುದ್ಧ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಕೇವಲ ನಾಲ್ಕು ದಿನಗಳಲ್ಲಿ 6,941 ಮಂದಿ ಧೂಮಪಾನಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಾರುಕಟ್ಟೆಗಳು, ಮೆಟ್ರೊ ಸ್ಟೇಷನ್‍ಗಳು ಮತ್ತು ಬಸ್ ನಿಲ್ದಾಣಗಳು ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದು, ಅತಿ ಹೆಚ್ಚು ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಈ ಧೂಮಪಾನಿಗಳಲ್ಲಿ ಶೇ.30ರಷ್ಟು ಮಹಿಳೆಯರಿದ್ದಾರೆ. ಸಂಜೆ 6 ರಿಂದ ರಾತ್ರಿ 9 ಗಂಟೆವರೆಗೆ ಅತಿಹೆಚ್ಚು ಉಲ್ಲಂಘನೆ ಪ್ರಕರಣಗಳು ವರದಿಯಾಗಿವೆ.

Facebook Comments

Sri Raghav

Admin