ಆನಂದ್ ಆಸ್ನೋಟಿಕರ್ ಜೆಡಿಎಸ್‍ಗೆ

ಈ ಸುದ್ದಿಯನ್ನು ಶೇರ್ ಮಾಡಿ

Anand-02
ಶಿವಮೊಗ್ಗ,ಜ.12- ಜೆಡಿಎಸ್‍ಗೆ ಆನಂದ್ ಆಸ್ನೋಟಿಕರ್ ಇದೇ 15ರಂದು ಸೇರ್ಪಡೆಯಾಗುತ್ತಿದ್ದಾರೆ ಎಂದು ಶಾಸಕ ಮಧುಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಆನಂದ್ ಆಸ್ನೋಟಿಕರ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ. ಕಾಂಗ್ರೆಸ್‍ನ ಮಂಜುನಾಥ್ ಗೌಡ ಸಹ ಪಕ್ಷ ಸೇರುತ್ತಿದ್ದು, ಮುಂದಿನ ಚುನಾವಣೆಯಲ್ಲಿ ತೀರ್ಥಹಳ್ಳಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.

ಸಕ್ರೀಯ ರಾಜಕಾರಣಕ್ಕೆ ಗೀತಾ ಶಿವರಾಜ್‍ಕುಮಾರ್:
ಗೀತಾ ಶಿವರಾಜ್‍ಕುಮಾರ್ ಕಾಂಗ್ರೆಸ್‍ಗೆ ಸೇರುತ್ತಿಲ್ಲ. ಜೆಡಿಎಸ್‍ನಲ್ಲೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದ ಅವರು, ಶೀಘ್ರದಲ್ಲೇ ಅವರು ಸಕ್ರೀಯ ರಾಜಕಾರಣಕ್ಕೆ ಬರಲಿದ್ದಾರೆ ಎಂದರು.

Facebook Comments

Sri Raghav

Admin