ನಾನೂ ಆರ್‍ಎಸ್‍ಎಸ್ ಕಾರ್ಯಕರ್ತ, ನನ್ನನ್ನು ಬಂಧಿಸಿ : ಜಗದೀಶ್ ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

Jagadish-Shettar-01

ಹುಬ್ಬಳ್ಳಿ,ಜ.12- ನಾನು ವಿಪಕ್ಷ ನಾಯಕ ಹಾಗೂ ಆರ್‍ಎಸ್‍ಎಸ್ ಕಾರ್ಯಕರ್ತನಾಗಿದ್ದು, ನಾವು ಉಗ್ರಗಾಮಿಗಳಾದರೆ ನಮ್ಮನ್ನು ಬಂಧಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಸವಾಲು ಹಾಕಿದರು. ಆರ್‍ಎಸ್‍ಎಸ್ ಮತ್ತು ಭಜರಂಗದಳ ಕಾರ್ಯಕರ್ತರು ಉಗ್ರಗಾಮಿಗಳು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮನ್ನು ಬಂಧಿಸುವ ಧೈರ್ಯ ಅವರಿಗೆ ಇಲ್ಲ. ಬಿಜೆಪಿ ಸಂಘಟನೆಯನ್ನು ನೋಡಿ ಸಿಎಂ ಆತ್ಮಸ್ಥೈರ್ಯ ಕಳೆದುಕೊಂಡು ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಮಾನಸಿಕ ಸ್ಥಿಮಿತ ಸಹ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಪಿಎಫ್‍ಐ ಸಂಘಟನೆಯನ್ನು ನಿಷೇಧ ಮಾಡಲು ರಾಜ್ಯ ಸರ್ಕಾರಕ್ಕೆ ಆಗುವುದಿಲ್ಲ. ಇದರಲ್ಲಿ ಇವರೂ ರಾಜಕೀಯ ಮಾಡುತ್ತಿದ್ದಾರೆ ಎಂದರು. ಇನ್ನೂ ರಾಜ್ಯಕ್ಕೆ ಶಿವಸೇನೆ ಪಕ್ಷ ಆಗಮನ ಹಿನ್ನಲೆ ಯಲ್ಲಿ ಮಾತನಾಡಿದ ಅವರು ಶಿವಸೇನೆಯಿಂದ ನಮ್ಮ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು. ಈ ಹಿಂದೆ ರಾಜ್ಯ ಇಂತಹ ಹಲವಾರು ಪಕ್ಷಗಳು ಬಂದು ಹೋಗಿವೆ. ಆದ್ದರಿಂದ ಇವು ಲೆಕ್ಕಕ್ಕಿಲ್ಲ ಎಂದರು.  ಇದೇ ವೇಳೆ ಸ್ವಾಮಿ ವಿವೇಕಾನಂದ ಜಯಂತಿಯಲ್ಲಿ ಭಾಗಿಯಾದ ನಂತರ ಹೇಳಿಕೆ ನೀಡಿದ ಅವರು, ಸ್ವಾಮಿ ವಿವೇಕಾನಂದರ ತತ್ವಾದರ್ಶ ಇಂದಿಗೂ ಪ್ರಸ್ತುತ ಎಂದರು. ಹುಬ್ಬಳ್ಳಿ ಮಹಾನಗರ ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಗೇಶ ಕಲಬುರಗಿ, ಹು-ಧಾ ಮಹಾನಗರ ಪಾಲಿಕೆ ಮೇಯರ್ ಡಿ.ಕೆ. ಚೌಹಾಣ್ ಮತ್ತಿತರರಿದ್ದರು.

Facebook Comments

Sri Raghav

Admin