ದೋಣಿ ಮುಳುಗಿ ವಿದ್ಯಾರ್ಥಿಗಳು ಜಲಸಮಾಧಿ

ಈ ಸುದ್ದಿಯನ್ನು ಶೇರ್ ಮಾಡಿ

Student-2
ಮುಂಬೈ, ಜ.13- ವಿದ್ಯಾರ್ಥಿಗಳನ್ನು ಹೊತ್ತೋಯ್ಯುತ್ತಿದ್ದ ದೋಣಿಯೊಂದು ಮಹಾರಾಷ್ಟ್ರದ ಪಾಲಘಾಟ್ ಜಿಲ್ಲೆಯ ದಹನು ಕರಾವಳಿಯಲ್ಲಿ ಮುಳುಗಿದ್ದು, ಹಲವರು ಜಲ ಸಮಾಧಿಯಾಗಿರುವ ಶಂಕೆ ಇದೆ. ಅರಬ್ಬೀ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಜಿಲ್ಲಾ ಕಲೆಕ್ಟರ್ ಪ್ರಶಾಂತ್ ನರ್ನಾವರೆ ತಿಳಿಸಿದ್ದಾರೆ. 40 ವಿದ್ಯಾರ್ಥಿಗಳಿದ್ದ ದೋಣಿ ಮಗುಚಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 15 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.25ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ನಾಪತ್ತೆಯಾಗಿರುವ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

Facebook Comments

Sri Raghav

Admin