ಭೀಕರ ರಸ್ತೆ ಅಪಘಾತದಲ್ಲಿ 6 ಕುಸ್ತಿಪಟುಗಳ ಘೋರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--02
ಮುಂಬೈ, ಜ.13-ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಅಪಾಘಾತದಲ್ಲಿ ಆರು ಕುಸ್ತಿಪಟುಗಳು ಮೃತಪಟ್ಟು, ಇತರ ಏಳು ಮಂದಿ ತೀವ್ರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಆಂಧ್ ಗ್ರಾಮದಲ್ಲಿ ನಡೆದ ಸ್ಥಳೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾಡೇಗಾಂವ್=ಸಾಂಗ್ಲಿ ಬಳಿ ಕುಸ್ತಿಪಟುಗಳಿದ್ದ ಕಾರು ಅತಿವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್‍ಗೆ ಅಪ್ಪಳಿಸಿತು. ಈ ದುರಂತದಲ್ಲಿ ಆರು ಕುಸ್ತಿಪಟುಗಳು ಮೃತಪಟ್ಟರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ಗಾಯಾಳುಗಳಿಗೆ ಸಾಂಗ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ನಂತರ ಪರಾರಿಯಾಗಿರುವ ಟ್ರ್ಯಾಕ್ಟರ್ ಚಾಲಕನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

Facebook Comments

Sri Raghav

Admin