ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಡರ ಹೆಸರಿಡಲು ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Hubli--02
ಬೆಂಗಳೂರು, ಜ.13-ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಸಿದ್ಧರೂಡರ ಹೆಸರಿಡುವಂತೆ ಸಿದ್ದರೂಢ ಮಿಷನ್ ಅಧ್ಯಕ್ಷ ಡಾ.ಆರೂಢ ಭಾರತೀ ಸ್ವಾಮೀಜಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದೆಂದು ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ. ಈಗಾಗಲೇ ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲಾಗಿದೆ. ಆದರೆ ಇದುವರೆಗೂ ಯಾವುದೇ ರೈಲು ನಿಲ್ದಾಣ, ಬಸ್ ನಿಲ್ದಾಣ ಹಾಗೂ ವಿಮಾನ ನಿಲ್ದಾಣಕ್ಕೆ ಹಾಗೂ ಯಾವುದೇ ಯೋಜನೆಗಾಗಲಿ ಸರ್ಕಾರ ಸಿದ್ದರೂಢರ ಹೆಸರಿಟ್ಟಿಲ್ಲ ಎಂದು ಹೇಳಿದ್ದಾರೆ.

ಹುಬ್ಬಳ್ಳಿಗೆ ಸಿದ್ದರೂಢರಿಂದ ಐತಿಹಾಸಿಕ ಮನ್ನಣೆ ದೊರೆತಿದೆ. ಬಸವಣ್ಣನ ಆನಂತರ ಜ್ಯಾತ್ಯತೀತೆ ಹಾಗೂ ಸಮಾನತೆಗಾಗಿ ಕ್ರಾಂತಿ ಮಾಡಿದವರು ಅವರು. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಸಿದ್ದರೂಢರ ಹೆಸರಿಡುವಂತೆ ಮುಖ್ಯಮಂತ್ರಿಯವರು ಕೇಂದ್ರಕ್ಕೆ ಶಿಫಾರಸು ಮಾಡಲಿ ಎಂದು ಆರೂಢ ಭಾರತೀ ಸ್ವಾಮೀಜಿ ಒತ್ತಾಯಿಸಿದ್ದಾರೆ

Facebook Comments

Sri Raghav

Admin