ಇಸ್ರೇಲ್ ಪ್ರಧಾನಿ ನೆತನ್ಯಾಹು ಭಾರತ ಭೇಟಿ : ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ಬಲವರ್ಧನೆ

ಈ ಸುದ್ದಿಯನ್ನು ಶೇರ್ ಮಾಡಿ

Istrel--02
ಜೆರುಸಲೆಂ/ನವದೆಹಲಿ, ಜ.14-ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ಆರು ದಿನಗಳ ಭಾರತ ಪ್ರವಾಸ ಇಂದಿನಿಂದ ಆರಂಭವಾಗಿದ್ದು, ಉಭಯ ದೇಶಗಳ ನಡುವಣ ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ಬಲಗೊಳ್ಳಲು ವೇದಿಕೆ ಸಜ್ಜಾಗಿದೆ. ಇಂದು ಸಂಜೆ ನವದೆಹಲಿಗೆ ಆಗಮಿಸಲಿರುವ ನೆತನ್ಯಾಹು ಅವರನ್ನು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತಿಸುವರು. ನಂತರ ರಾಷ್ಟ್ರಪತಿ ಭವನದಲ್ಲಿ ಅವರಿಗೆ ಸಾಂಪ್ರದಾಯಿಕ ಭವ್ಯ ಸ್ವಾಗತ ನೀಡುವ ಕಾರ್ಯಕ್ರಮವಿದೆ.

ತಮ್ಮ ದೇಶದ ವಾಣಿಜ್ಯ ನಿಯೋಗದೊಂದಿಗೆ ಭೇಟಿ ನೀಡಿರುವ ಇಸ್ರೇಲ್ ಪ್ರಧಾನಿ ಅವರು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಿ ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕುವ ಕಾರ್ಯಕ್ರಮವಿದೆ. ಉಭಯ ದೇಶಗಳ ನಡುವೆ ಆರ್ಥಿಕ, ವಾಣಿಜ್ಯ, ವ್ಯಾಪಾರ, ಇಂಧನ, ಭದ್ರತೆ, ಮಾಹಿತಿ, ತಂತ್ರಜ್ಞಾನ, ಪ್ರವಾಸೋದ್ಯಮ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ದ್ವಿಪಕ್ಷೀಯ ಒಡಂಬಡಿಕೆ ಏರ್ಪಡಲಿದೆ.

15 ವರ್ಷಗಳ ಅಂತರದ ನಂತರ ಇಸ್ರೇಲ್ ಪ್ರಧಾನಿಯೊಬ್ಬರು ಭಾರತಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಎರಡು ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಸಂಬಂಧಗಳು ವೃದ್ದಿಯಾಗಿ 25 ವರ್ಷಗಳ ಸಂದರ್ಭದಲ್ಲೇ ನೆತನ್ಯಾಹು ಭೇಟಿ ಮಹತ್ವ ಪಡೆದುಕೊಂಡಿದೆ.

Facebook Comments

Sri Raghav

Admin