ಜೆಡಿಎಸ್‍ನಿಂದ ಅರ್ಷಿಯಾ ಆಲಿ ವಜಾ

ಈ ಸುದ್ದಿಯನ್ನು ಶೇರ್ ಮಾಡಿ

aSRHSI--01
ಬೆಂಗಳೂರು, ಜ.14-ಜೆಡಿಎಸ್‍ನ ಪ್ರಾಥಮಿಕ ಸದಸ್ಯತ್ವ ಹಾಗೂ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷ ಸ್ಥಾನದಿಂದ ಅರ್ಷಿಯಾ ಆಲಿ ಅವರನ್ನು ವಜಾಗೊಳಿಸಲಾಗಿದೆ.  ಜೆಡಿಎಸ್‍ನ ತತ್ವ ಸಿದ್ದಾಂತಕ್ಕೆ ವಿರುದ್ದವಾಗಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಅರ್ಷಿಯಾ ಆಲಿ ಅವರನ್ನು ವಜಾಗೊಳಿಸಿರುವುದಾಗಿ ಜೆಡಿಎಸ್ ಮಹಾಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಖ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿಯವರ ಆದೇಶದಂತೆ ವಜಾಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Facebook Comments

Sri Raghav

Admin