ನ್ಯಾಯಾಂಗದಲ್ಲಿನ ಬಿರುಕ ಶಮನಕ್ಕೆ ರಾಷ್ಟ್ರಪತಿ, ಪ್ರಧಾನಮಂತ್ರಿ ಮಧ್ಯ ಪ್ರವೇಶಕ್ಕೆ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

mudda

ತುಮಕೂರು, ಜ.14- ನ್ಯಾಯಾಂಗದಲ್ಲಿ ಉಂಟಾಗಿರುವ ಬಿರುಕನ್ನು ಸರಿಪಡಿಸಲು ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿಗಳು ಮಧ್ಯ ಪ್ರವೇಶಿಸಬೇಕು ಎಂದು ಸಂಸದ ಎಸ್.ಪಿ.ಮುದ್ದಹನುಮೇಗೌಡ ಮನವಿ ಮಾಡಿಕೊಂಡಿದ್ದಾರೆ. ಸುಪ್ರೀಂಕೋರ್ಟ್‍ನ ನಾಲ್ವರು ನ್ಯಾಯಾಧೀಶರು, ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದಿರುವುದು ದುರದೃಷ್ಟಕರ ಎಂದು ಅವರು ಬಣ್ಣಿಸಿದರು.

ನ್ಯಾಯಾಂಗದಲ್ಲಿನ ಈ ಘಟನೆ ದೇಶದ ಜನರ ಭಾವನೆಗೆ ಧಕ್ಕೆ ಉಂಟುಮಾಡಿದೆ. ಇದು ಪ್ರಜಾಪ್ರಭುತ್ವ ಕ್ಕೆ ಮಾರಕವಾಗುವ ಬೆಳವಣಿಗೆ ಎಂದರು. ನ್ಯಾಯಾಂಗದಲ್ಲಿನ ಈ ದೋಷವನ್ನು ಕಾಂಗ್ರೆಸ್ ಪಕ್ಷ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ನ್ಯಾಯಾಂಗ ತೊಂದರೆಯಲ್ಲಿದ್ದಾಗ ಕಾರ್ಯಾಂಗ ಮತ್ತು ಶಾಸಕಾಂಗ ಮಧ್ಯಪ್ರವೇಶಿಸುವ ಅವಶ್ಯಕತೆ ಇದೆ. ತಕ್ಷಣವೇ ರಾಷ್ಟ್ರಪತಿಗಳಾದ ರಮಾನಾಥ್ ಕೋವಿಂದ್ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಮಸ್ಯೆ ಬಗೆಹರಿಸಲು ಮುಂದಾಗಬೇಕೆಂದು ಮನವಿ ಮಾಡಿಕೊಂಡರು. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ನ್ಯಾಯಾಂಗದಲ್ಲಿ ಇಂತಹ ಘಟನೆ ನಡೆದಿರುವುದು ಇಡೀ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಂತಿದೆ. ಹೀಗಾಗಿ ಸಮಸ್ಯೆ ಬಗೆಹರಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದರು. ಶಾಸಕ ಡಾ.ರಫೀಕ್ ಅಹ್ಮದ್, ಮಾಜಿ ಶಾಸಕ ಹೆಚ್.ನಿಂಗಪ್ಪ ಟೂಡಾ ಸದಸ್ಯರಾದ ಆಟೋ ರಾಜು, ರಾಯಸಂದ್ರ ರವಿ ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin