ಭದ್ರಾನದಿ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ವಿದ್ಯಾರ್ಥಿ

ಈ ಸುದ್ದಿಯನ್ನು ಶೇರ್ ಮಾಡಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಜ.14- ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸುಳಿಗೆ ಸಿಕ್ಕಿ ನೀರು ಪಾಲಾಗಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಐಡಿಎಸ್‍ಜಿ ಕಾಲೇಜಿನ ವಿದ್ಯಾರ್ಥಿ ಸುಖೇಶ್ (20) ನೀರು ಪಾಲಾದ ದುರ್ದೈವಿ. ನಗರದ ಖಾಂಡ್ಯ ಬಳಿ ಭದ್ರಾ ನದಿಗೆ ಅಡ್ಡಲಾಗಿ ಹಾಕಿರುವ ತೂಗು ಸೇತುವೆ ಹತ್ತಿರ ಸ್ನೇಹಿತರೊಂದಿಗೆ ನಿನ್ನೆ ಸಂಜೆ 5 ಗಂಟೆಗೆ ಈಜಲು ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಸುಳಿಯಲ್ಲಿ ಸಿಲುಕಿ ಸುಖೇಶ್ ನೀರು ಪಾಲಾಗಿದ್ದಾನೆ. ಸ್ನೇಹಿತರೆಲ್ಲ ಹುಡುಕಾಡಿದರೂ ಸಿಗಲಿಲ್ಲ. ಕೂಡಲೇ ಬಾಳೆಹೊನ್ನೂರು ಪೆÇಲೀಸರಿಗೆ ತಿಳಿಸಿದ್ದಾರೆ. ಸಂಜೆ ಕತ್ತಲಾದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿ ಬೆಳಗ್ಗೆ ಶೋಧಕಾರ್ಯ ಮುಂದುವರಿಸಿದ್ದರೂ ಯಾವುದೇ ಸುಳಿವು ಪತ್ತೆಯಾಗಿಲ್ಲ ಎಂದು ಬಾಳೆಹೊನ್ನೂರು ಪೊಲೀಸರು ತಿಳಿಸಿದ್ದಾರೆ.

Facebook Comments

Sri Raghav

Admin