ಸದಾಶಿವ ವರದಿ : ದಲಿತ ಜನಪ್ರತಿನಿಧಿಗಳ ಜತೆ ಸಿಎಂ ಸಂಧಾನ..!

ಈ ಸುದ್ದಿಯನ್ನು ಶೇರ್ ಮಾಡಿ

CM-Sidd

ಬೆಂಗಳೂರು, ಜ.14-ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ಸಂಬಂಧ ಸಾಧಕ-ಬಾಧಕಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿಂದು ಪರಿಶಿಷ್ಟ ಜಾತಿ ಜನಪ್ರತಿನಿಧಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಿದರು.  ಮೂರು ದಶಕಗಳ ಈ ಸಮಸ್ಯೆ ಬಗೆಹರಿಸುವ ಸಂಬಂಧ ಎಲ್ಲಾ ದಲಿತ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳು ಸುದೀರ್ಘ ಚರ್ಚೆ ನಡೆಸಿದರು. ಈ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸುವ ಸಾಧ್ಯ-ಸಾಧ್ಯತೆ ಬಗ್ಗೆಯೂ ಕೂಡ ಚರ್ಚೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಎಚ್.ಆಂಜನೇಯ, ಪ್ರಿಯಾಂಕ್ ಖರ್ಗೆ, ಆರ್.ಬಿ.ತಿಮ್ಮಾಪುರ್, ರುದ್ರಪ್ಪ ಲಮಾಣಿ, ಸಂಸದರಾದ ಕೆ.ಎಚ್.ಮುನಿಯಪ್ಪ, ಚಂದ್ರಪ್ಪ, ಶಾಸಕರಾದ ಅರವಿಂದ್ ಜಾಧವ್, ಧರ್ಮಸೇನಾ, ನರೇಂದ್ರಸ್ವಾಮಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಇಂದಿನ ಸಭೆಯಲ್ಲಿ ಹಾಜರಿದ್ದು, ಸದಾಶಿವ ಆಯೋಗದ ವರದಿ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಚುನಾವಣಾ ಸಂದರ್ಭದಲ್ಲಿ ಈ ಸಮಸ್ಯೆಯನ್ನು ಬೆಣ್ಣೆಯಲ್ಲಿ ಕೂದಲು ತೆಗೆದಂತೆ ಬಗೆಹರಿಸಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಜನಪ್ರತಿನಿಧಿಗಳ ಸಹಕಾರ ಅಗತ್ಯ. ಸಮಸ್ಯೆ ಸೂಕ್ಷ್ಮವಾಗಿರುವುದರಿಂದ ಉನ್ನತ ಮಟ್ಟದ ಸಮಿತಿಯ ಅಗತ್ಯತೆ ಬಗ್ಗೆ ಸಭೆಯಲ್ಲಿ ಪ್ರಸ್ತಾಪವಾಗಿದೆ ಎನ್ನಲಾಗಿದೆ. ಸದಾಶಿವ ಆಯೋಗದ ವರದಿ ಜಾರಿಗೆ ಒಂದು ಸಮುದಾಯ ಆಗ್ರಹಿಸಿದರೆ ಮತ್ತೊಂದು ಸಮುದಾಯ ಜಾತಿ ಜನಗಣತಿ ಆಧಾರದ ಮೇಲೆ ಸವಲತ್ತುಗಳನ್ನು ವಿತರಿಸುವಂತೆ ಒತ್ತಾಯಿಸುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಎಚ್ಚರಿಕೆ ಹೆಜ್ಜೆ ಇಡಬೇಕಾಗಿದೆ. ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಲ್ಲರೂ ಒಂದು ದೃಢ ನಿರ್ಧಾರಕ್ಕೆ ಬರಬೇಕಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

Facebook Comments

Sri Raghav

Admin