ಸರಗಳ್ಳ ಸೋಮನನ್ನ ರೆಡ್ ಹ್ಯಾಂಡ್ ಆಗಿ ಹಿಡಿದ ಎಚ್‍ಎಸ್‍ಆರ್ ಪೊಲೀಸರು

ಈ ಸುದ್ದಿಯನ್ನು ಶೇರ್ ಮಾಡಿ

chane-snachaer

ಬೆಂಗಳೂರು, ಜ.16- ನಗರದಲ್ಲಿ ಸರಗಳ್ಳತನಕ್ಕೆ ಬ್ರೇಕ್ ಹಾಕುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ ಬೆನ್ನಲ್ಲೇ ಇಂದು ಮುಂಜಾನೆ ಸರಗಳ್ಳನೊಬ್ಬನನ್ನು ಎಚ್‍ಎಸ್‍ಆರ್ ಲೇಔಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆನೇಕಲ್‍ನ ಸೋಮಶೇಖರ್ ಬಂಧಿತ ಆರೋಪಿ. ಮುಂಜಾನೆ ಪೊಲೀಸರು ಮಾರುತಿ ಓಮ್ನಿ ವಾಹನದಲ್ಲಿ ಕರ್ತವ್ಯದಲ್ಲಿ ನಿರತರಾಗಿದ್ದಾಗ 5.30ರ ಸಮಯದಲ್ಲಿ ಅನುಮಾನಾಸ್ಪದವಾಗಿ ಈ ವ್ಯಕ್ತಿ ತಿರುಗಾಡುತ್ತಿದ್ದ ಬಗ್ಗೆ ಮಾಹಿತಿ ಲಭಿಸಿದೆ. ತಕ್ಷಣ ಸ್ಥಳಕ್ಕಾಗಮಿಸಿ ಆತನ ಪತ್ತೆಗೆ ಕಾರ್ಯಪ್ರವೃತ್ತರಾಗುತ್ತಿದ್ದಂತೆ ಈತ ತಪ್ಪಿಸಿಕೊಳ್ಳಲು ಮನೆಯೊಂದರ ಛಾವಣಿ ಹತ್ತಲು ಯತ್ನಿಸಿದೀಗ ಅದರ ಛಾವಣಿ ಕುಸಿದು ಬಿದ್ದಿದೆ. ಈ ವೇಳೆ ಪೊಲೀಸರು ಆತನನ್ನು ಸುತ್ತುವರೆದು ಬಂಧಿಸುವಲ್ಲಿ ಯಶಸ್ವಿಯಗಿದ್ದಾರೆ.

Facebook Comments

Sri Raghav

Admin