ಕಾಶಿನಾಥ್ ಕನ್ನಡ ಚಿತ್ರರಂಗದ ಆಸ್ತಿ : ಸಾ.ರಾ.ಗೋವಿಂದು

ಈ ಸುದ್ದಿಯನ್ನು ಶೇರ್ ಮಾಡಿ

Govind
ಬೆಂಗಳೂರು, ಜ.18- ಕಾಶಿನಾಥ್ ಕನ್ನಡ ಚಿತ್ರರಂಗದ ಆಸ್ತಿ. ಚಲನಚಿತ್ರರಂಗ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಹೇಳಿದರು. ಕಾಶಿನಾಥ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಅವರು, ಕಾಶಿನಾಥ್ ಚಲನಚಿತ್ರ ಕ್ಷೇತ್ರದಲ್ಲಿ ಅಪಾರ ಸಾದನೆ ಮಾಡಿದ್ದಾನೆ. ನಟ-ನಿರ್ಮಾಪಕ-ನಿರ್ದೇಶಕರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಹಲವು ಪ್ರತಿಭೆಗಳನ್ನು ಚಲನಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಅವರೆಲ್ಲರೂ ಈಗ ಚಿತ್ರರಂಗದಲ್ಲಿ ದೈತ್ಯರಾಗಿ ಬೆಳೆದಿದ್ದಾರೆ.

ಕಾಶಿನಾಥ್ ಅವರು ನಮ್ಮೆಲ್ಲರ ಶಕ್ತಿಯಾಗಿ ಉಳಿದಿದ್ದಾರೆ. ಚಲನಚಿತ್ರ ರಂಗದಲ್ಲಿ ಹೆಸರು ಮಾಡಿದ ವ್ಯಕ್ತಿ. ಅವರು ಸರಳ ಮತ್ತು ಸ್ನೇಹಜೀವಿಯಾಗಿದ್ದರು. ಕೆಲಸದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದರು ಎಂದು ಹೇಳಿದರು. ಕನ್ನಡ ಚಿತ್ರರಂಗದ ದಿಕ್ಕನ್ನೇ ಬದಲಿಸಿದ ಮಹಾನ್ ಕಲಾವಿದರು. ಅಪ್ಪಟ ಕನ್ನಡ ಚಿತ್ರಗಳ ನಿರ್ದೇಶಕರಾಗಿದ್ದವರು. ಕನ್ನಡವನ್ನು ಹೆಚ್ಚು ಪ್ರೀತಿಸುತ್ತಿದ್ದವರು. ಅವರ ನಿಧನದಿಂದ ಉತ್ತಮ ನಿರ್ದೇಶಕ, ನಟನನ್ನು ಕಳೆದುಕೊಂಡಿರುವುದು ತುಂಬಲಾರದ ನಷ್ಟ ಉಂಟುಮಾಡಿದೆ ಎಂದು ಹೇಳಿದರು.

ಅವರಿಗೆ ಮಾರಕ ಕಾಯಿಲೆ ಕ್ಯಾನ್ಸರ್ ಇದ್ದರೂ ಕೂಡ ಚೌಕ ಚಿತ್ರದಲ್ಲಿ ಅಭಿನಯಿಸಿರುವುದನ್ನು ಗಮನಿಸಿದರೆ ಅವರಿಗೆ ಚಿತ್ರರಂಗದ ಮೇಲೆ ಇರುವ ಪ್ರೀತಿ ಎಷ್ಟು ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು. ಕಾಶಿನಾಥ್ ಅವರ ನಿಧನ ಸಿನಿಮಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಾ.ರಾ.ಗೋವಿಂದು ಶೋಕ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin