ಬಜೆಟ್ ಮಂಡನೆ ಬದಲು ಸರ್ಕಾರದ ಸಾಧನೆ ಬಗ್ಗೆ ಶ್ವೇತಪತ್ರ ಹೊರಡಿಸಿ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Eshwarappa--01

ಬೆಂಗಳೂರು,ಜ.18-ಬಜೆಟ್ ಮಂಡನೆ ಮಾಡುವ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸರ್ಕಾರದ ಸಾಧನೆ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹೋದಲೆಲ್ಲ ಬಿಜೆಪಿಯನ್ನು ಟೀಕಿಸುವುದನ್ನೇ ಸಾಧನೆ ಎಂದುಕೊಂಡಿದ್ದಾರೆ. ಚುನಾವಣೆಗಾಗಿ ಭರವಸೆಯ ಬಜೆಟ್ ಮಂಡಿಸುವುದು ಬೇಡ. ಕೂಡಲೇ ತಮ್ಮ ಸರ್ಕಾರದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.  ನಾಲ್ಕು ವರ್ಷದ ಸಾಧನಾ ಸಮಾವೇಶ ಮಾಡಿ ಇವರು ಏನು ಸಾಧನೆ ಮಾಡಿದ್ದಾರೆ. ಈಗ ಘೋಷಣೆ ಮಾಡಿರುವ ಯೋಜನೆಗಳಿಗೆ ಎಲ್ಲಿಂದ ಹಣ ತರುತ್ತಾರೆ. ಇವೆಲ್ಲ ಪೊಳ್ಳು. ಯಾವುದೂ ಅನುಷ್ಠಾನ ಆಗಲು ಸಾಧ್ಯವಿಲ್ಲ ಎಂದು ಹೇಳಿದರು.

ಕಾಂಗ್ರೆಸ್, ಬಿಜೆಪಿ ಒಟ್ಟಾಗಿ ಮುಂದಾದರೆ ಮಹದಾಯಿ ವಿವಾದ ಬಗೆಹರಿಯಲು ಸಾಧ್ಯವಾಗುತ್ತದೆ ಎಂದು ಹೇಳಿದ ಅವರು, ಸಿದ್ದರಾಮಯ್ಯ ಈ ವಿಷಯದಲ್ಲಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ. ಸೋನಿಯಾ ಗಾಂಧಿ ಅವರು ಕೂಡ ದ್ರೋಹ ಮಾಡಿದ್ದಾರೆ. ಈಗ ಮಹದಾಯಿ ವಿವಾದ ಬಗೆಹರಿಯಲು ಪ್ರಧಾನಿ ಮೋದಿ ಅವರು ಮಧ್ಯಪ್ರವೇಶಿಸಲಿ ಎಂದು ಹೇಳುತ್ತಿರುವುದರಲ್ಲಿ ಅರ್ಥವೇ ಇಲ್ಲ ಎಂದು ತಿಳಿಸಿದರು. ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸದಿಂದ ಬೇರೆ ಪಕ್ಷದವರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ, ಇಂದು ಇಬ್ಬರು ಶಾಸಕರು ಸೇರ್ಪಡೆಯಾಗಿದ್ದಾರೆ. ಇನ್ನು ಹಲವಾರು ಮಂದಿ ಬರುವವರಿದ್ದಾರೆ ಎಂದು ಹೇಳಿದರು.  ಹೀಗೆ ಶಾಸಕರು ಪಕ್ಷಾಂತರ ಮಾಡುವುದನ್ನು ನಾನು ವೈಯಕ್ತಿಕವಾಗಿ ಒಪ್ಪುವುದಿಲ್ಲ. ಅಧಿಕಾರದ ಆಸೆ, ಲಾಭಕ್ಕಾಗಿ ಬೇರೆ ಪಕ್ಷಕ್ಕೆ ಹೋಗುವುದು ಸರಿಯಲ್ಲ. ಶಾಸಕರಾಗುವವರಿಗೆ, ಶಾಸಕರಾದವರಿಗೆ ಜನಸೇವೆಯೇ ಮುಖ್ಯ ಎಂದು ಈಶ್ವರಪ್ಪ ಹೇಳಿದರು.

ಸಂತಾಪ:   ಇದೇ ವೇಳೆ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಕಾಶಿನಾಥ್ ಅವರ ನಿಧನಕ್ಕೆ ಈಶ್ವರಪ್ಪ ತೀವ್ರ ದುಃಖ ವ್ಯಕ್ತಪಡಿಸಿದರು.

Facebook Comments

Sri Raghav

Admin