ಬಿಬಿಎಂಪಿಯ ನಿವೃತ್ತ ಸಂಪರ್ಕಾಧಿಕಾರಿ ಶಿವಶರಣಪ್ಪ ಖಂಡ್ರೆ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

Khandre
ಬೆಂಗಳೂರು, ಜ.19-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ಸಾರ್ವಜನಿಕರ ಸಂಪರ್ಕಾಧಿಕಾರಿ ಶಿವಶರಣಪ್ಪ ಖಂಡ್ರೆ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನಿಯೋಜನೆಗೊಂಡಿದ್ದರು. ಬಿಬಿಎಂಪಿಯಲ್ಲಿ ಅಪಾರ ಜನಮನ್ನಣೆ ಗಳಿಸಿ ಸ್ನೇಹಜೀವಿಯಾಗಿದ್ದರು. ಸದಾ ನಗುಮೊಗದಿಂದ ಇರುತ್ತಿದ್ದ ಖಂಡ್ರೆ ಅವರು ತಮ್ಮ ಮಾಹಿತಿನಿಂದಲೇ ಎಲ್ಲರನ್ನು ಆಕರ್ಷಿಸುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿ, ಸಂಭಾವಿತ ಅಧಿಕಾರಿಯಾಗಿದ್ದರು.

ಒಂದು ಕಪ್ಪು ಚುಕ್ಕೆಯಿಲ್ಲದಂತೆ ತಮ್ಮ ಅಧಿಕಾರಾವಧಿಯಲ್ಲಿ ದಕ್ಷ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಅವರ ನಿಧನಕ್ಕೆ ಮೇಯರ್ ಸಂಪತ್‍ರಾಜ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಆಯುಕ್ತರಾದ ಮಂಜುನಾಥ್ ಪ್ರಸಾದ್ ಸೇರಿದಂತೆ ಬಿಬಿಎಂಪಿ ಸದಸ್ಯರು, ಅನೇಕ ಹಿರಿಯ ಅಧಿಕಾರಿಗಳು, ಸ್ನೇಹಿತರು, ಬಂಧುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin