ಶಾಸಕ ಎಂ.ಪಿ.ರವೀಂದ್ರ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

MP-Raveendra--01
ಮೈಸೂರು,ಜ.19-ದಾವಣಗೆರೆ ಜಿಲ್ಲೆ ಹರಪ್ಪನಹಳ್ಳಿ ಕ್ಷೇತ್ರದ ಶಾಸಕ ಎಂ.ಪಿ.ರವೀಂದ್ರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಪುತ್ರರೂ ಆಗಿರುವ ಎಂ.ಪಿ.ರವೀಂದ್ರ ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದು ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ಸೇರಿದ್ದಾರೆ. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ವೇಳೆ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದರಿಂದ ಜ.17ರಂದೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Facebook Comments

Sri Raghav

Admin