ಬೆಳ್ಳಂದೂರು ಕೆರೆ ಬೆಂಕಿಗೆ ಕಾರಣ ಪತ್ತೆ ಹಚ್ಚುತ್ತಿರುವ ಅಧಿಕಾರಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Bellanguru--01
ಬೆಂಗಳೂರು, ಜ.20-ಬೆಳ್ಳಂದೂರು ಕೆರೆ ಹಾಗೂ ಸುತ್ತಮುತ್ತಲು ಬೆಂಕಿ ಹೇಗೆ ಕಾಣಿಸಿಕೊಂಡಿದೆ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳ ಹಾಗೂ ಗೃಹ ರಕ್ಷಕ ದಳದ ಡಿಜಿ ಎಂ.ಎನ್.ರೆಡ್ಡಿ ಅವರು ತಿಳಿಸಿದರು. ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಪಡೆದು ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ನಿನ್ನೆ ಮಧ್ಯಾಹ್ನದಿಂದ ರಾತ್ರಿಯಿಡೀ ನಮ್ಮ ಅಧಿಕಾರಿ, ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ತೊಡಗಿದ್ದರು. ಬೆಳಗ್ಗೆ ತಹಬದಿಗೆ ಬಂದಿದೆ. ಕೆಲವೇ ಗಂಟೆಗಳಲ್ಲಿ ಸಂಪೂರ್ಣ ನಿಯಂತ್ರಣಕ್ಕೆ ಬರಲಿದೆ ಎಂದು ಅವರು ತಿಳಿಸಿದರು.

ಈ ಹಿಂದೆಯೂ ಹಲವು ಬಾರಿ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಹಲವು ಕಾರಣಗಳಿಂದ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಕರ್ತವ್ಯ ನಿರತ ಸಿಬ್ಬಂದಿ ಇದನ್ನು ಗಮನಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು.

Facebook Comments

Sri Raghav

Admin