ಚಿನ್ನಾಭರಣ ಕದ್ದು ಐಷಾರಾಮಿ ಜೀವನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕನ್ನಗಳ್ಳರ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

Nayeem--01
ಬೆಂಗಳೂರು,ಜ.22-ಮನೆಗಳ್ಳತನ ಮಾಡಿ ಚಿನ್ನಾಭರಣಗಳನ್ನು ಕದ್ದೊಯ್ದು ಐಷಾರಾಮಿ ಜೀವನ ನಡೆಸುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿ 14 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮೂಲತಃ ಮೈಸೂರಿನ ಬಿಲಾಲ್ ಖಾನ್(30) ಮತ್ತು ಹೈದರಾಬಾದ್‍ನ ನಯೀಮ್ ಖಾನ್(28) ಬಂಧಿತ ಅಂತಾರಾಜ್ಯ ಕಳ್ಳರು. ಡಿ.2ರಂದು ಕೊಡಿಗೇಹಳ್ಳಿ ವ್ಯಾಪ್ತಿಯ ವಿಜಯ್‍ಕುಮಾರ್ ಎಂಬುವರ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಪೊಲೀಸರು ಈ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಿಂದ 14 ಲಕ್ಷ ಮೌಲ್ಯದ 450 ಗ್ರಾಂ ಚಿನ್ನದ ಆಭರಣಗಳು, 700 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇವರ ಬಂಧನದಿಂದ ಕೊಡಿಗೇಹಳ್ಳಿ ಠಾಣೆಯ ಐದು ಕನ್ನಗಳವು ಪ್ರಕರಣ ಪತ್ತೆಯಾಗಿದೆ. ಆರೋಪಿಗಳ ಮೇಲೆ ಆಂಧ್ರಪ್ರದೇಶದ ಫಲಕನಾಮಾ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ. ಅಪರ ಪೊಲೀಸ್ ಆಯುಕ್ತ ಸೀಮಂತ್‍ಕುಮಾರ್ ಸಿಂಗ್ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತ ಗಿರೀಶ್ ಅವರ ನೇತೃತ್ವದಲ್ಲಿ ಸಿಬ್ಬಂದಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments

Sri Raghav

Admin