ಪೊಲೀಸ್ ಇಲಾಖೆಯಲ್ಲಿ ಹೈದ್ರಾಬಾದ್ ಕರ್ನಾಟಕ ಅಭ್ಯರ್ಥಿಗಳಿಗೆವೆ ಉದ್ಯೋಗವಕಾಶಗಳು

ಈ ಸುದ್ದಿಯನ್ನು ಶೇರ್ ಮಾಡಿ

police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿಗಳ ಹೈದ್ರಾಬಾದ್ ಕರ್ನಾಟಕ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 15
ಹುದ್ದೆಗಳ ವಿವರ
1.ರಸಾಯನಶಾಸ್ತ್ರ ವಿಭಾಗ – 02
2.ಭೌತಶಾಸ್ತ್ರ ವಿಭಾಗ – 01
3.ಜೀವಶಾಸ್ತ್ರ ವಿಭಾಗ – 02
4.ಪ್ರಶ್ನಿತ ದಾಸ್ತಾವೇಜು ವಿಭಾಗ – 02
5.ನಾರ್ಕೋಟಿಕ್ಸ್ ವಿಭಾಗ – 01
6.ಡಿಎನ್‍ಎ ವಿಭಾಗ – 01
7.ಅಗ್ನಿ ಅಸ್ತ್ರ ವಿಭಾಗ – 01
8.ಸೈಕೋಲಜಿ ವಿಭಾಗ _ 02
9.ಕಂಪ್ಯೂಟರ್ ಫೊರೆನ್ಸಿಕ್ ವಿಭಾಗ – 01
10.ಮೊಬೈಲ್ ಫೊರೆನ್ಸಿಕ್ ವಿಭಾಗ – 01
11.ಆಡಿಯೋ, ವಿಡಿಯೋ ಫೊರೆನ್ಸಿಕ್ ವಿಭಾಗ – 01
ವಿದ್ಯಾರ್ಹತೆ : ಎಲ್ಲಾ ಹುದ್ದೆಗಳಿಗೂ ಸಂಬಂಧಿಸಿದ ವಿಷಯದಲ್ಲಿ ಸಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ : ಎಲ್ಲಾ ಹುದ್ದೆಗಳಿಗೂ ಕನಿಷ್ಠ ವಯೋಮಿತಿಯನ್ನು 21 ವರ್ಷಗಳಿಗೆ ನಿಗದಿ ಮಾಡಲಾಗಿದ್ದು, ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35, ಹಿಂದುಳಿದ ವರ್ಗದವರಿಗೆ 38, ಪ.ಜಾ, ಪ.ಪಂ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿ ಮಾಡಲಾಗಿದೆ.
ಶುಲ್ಕ : ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದವರಿಗೆ 250 ರೂ, ಪ.ಜಾ, ಪ.ಪಂ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ. ಶುಲ್ಕವನ್ನು ಎಸ್.ಬಿ.ಐ ಅಥವಾ ಅಂಚೆ ಕಚೇರಿಯ ಅಧಿಕೃತ ಶಾಖೆಗಳಲ್ಲಿ ಪಾವತಿಸುವಂತೆ ತಿಳಿಸಿದೆ.
ರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-01-2018
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 02-02-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.ksp.gov.in ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin