ರಾಜಧಾನಿ ಬೆಂಗಳೂರಿನಲ್ಲಿ ಬಂದ್ ಶಾಂತಿಯುತ

ಈ ಸುದ್ದಿಯನ್ನು ಶೇರ್ ಮಾಡಿ

Bndh--02
ಬೆಂಗಳೂರು,ಜ.25- ರಾಜಧಾನಿ ಬೆಂಗಳೂರಿನಲ್ಲಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಬಹುತೇಕ ಶಾಂತಿಯುತವಾಗಿ ಬಂದ್ ನಡೆದಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಟಿ.ಸುನೀಲ್‍ಕುಮಾರ್ ಅವರು ಈ ಸಂಜೆಗೆ ತಿಳಿಸಿದರು. ಕೆಂಪೇಗೌಡ ಬಸ್ ನಿಲ್ದಾಣ, ಬಿಎಂಟಿಸಿ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ , ರೈಲ್ವೆ ನಿಲ್ದಾಣ, ಟೌನ್‍ಹಾಲ್ ಮತ್ತಿತರ ಕಡೆ ಪ್ರತಿಭಟನಾಕಾರರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ.

ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಬೆಳಗಿನಿಂದಲೇ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಮಲ್ಲೇಶ್ವರಂನ 17ನೇ ಕ್ರಾಸ್‍ನಲ್ಲಿ ಟೀ ಅಂಗಡಿ ತೆರೆದ ಕಾರಣ ಇಬ್ಬರು ಕಲ್ಲು ತೂರಾಟ ನಡೆಸಿದ್ದಾರೆ. ಇವರಲ್ಲಿ ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಉಳಿದಂತೆ ನಗರದೆಲ್ಲೆಡೆ ಇದುವರೆಗೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Facebook Comments

Sri Raghav

Admin