ಕಾಂಗ್ರೆಸ್ ಆಡಳಿತದಲ್ಲಿ ಸಾಮಾಜಿಕ ನ್ಯಾಯಕ್ಕೆ ವಿಶೇಷ ಗಮನ : ಸಚಿವ ಟಿ.ಬಿ.ಜಯಚಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

tumakur
ತುಮಕೂರು,ಜ.26-ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಸಮೃದ್ಧ ಸಮಾಜ ನಿರ್ಮಾಣ ಮಾಡುವ ಮೂಲಕ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರ ಏಳ್ಗೆಗೆ ವಿಶೇಷ ಗಮನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು. ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 69ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕೃಷಿ, ಕೈಗಾರಿಕೆ , ಶಿಕ್ಷಣ, ವಿಜ್ಞಾನಕ್ಕೆ ಆದ್ಯತೆ ನೀಡಿರುವುದಲ್ಲದೆ ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ ಸೇರಿದಂತೆ ಸರ್ವಾಂಗೀಣವಾಗಿ ಹಲವು ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವ ಮೂಲಕ ಇಡೀ ರಾಷ್ಟ್ರದಲ್ಲೇ ನಮ್ಮ ರಾಜ್ಯವನ್ನು ಮಾದರಿಯನ್ನಾಗಿ ಮಾಡುತ್ತಿದ್ದೇವೆ. 2013ರಿಂದ ಇಲ್ಲಿಯ ತನಕ ರೈತರು 9,813 ಕೃಷಿ ಹೊಂಡಗಳು, 343 ನಿವೇಶನಗಳು, ಸೂಕ್ಷ್ಮ ನೀರಾವರಿ ಯೋಜನೆಯಡಿ 25645 ಎಕ್ಟೇರ್ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆಯಲ್ಲಿ ಮಾಡಲಾಗಿದೆ.

ತೆಂಗು ಬೆಳಗಾರರು ಕಂಗಲಾಗಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರ 17908ರೈತರಿಗೆ 1.62 ಕೋಟಿ ಕ್ವಿಂಟಾಲ್ ಸಕ್ಕರೆ ಖರೀದಿಸಿ ರೈತರ ನೆರವಿಗೆ ಧಾವಿಸಿದೆ. ಸಾಲಬಾಧೆಯಿಂದ ತತ್ತರಿಸಿದ ರೈತರಿಗೆ 50 ಸಾವಿರವರೆಗೆ ಸಾಲ ಮನ್ನ ಮಾಡಿದೆ. ತುಮಕೂರು ಜಿಲ್ಲೆಯಲ್ಲಿ 1,09,889 ರೈತರಿಗೆ 33 ಕೋಟಿಯಷ್ಟು ಸಾಲ ಮನ್ನದ ಸೌಲಭ್ಯ ಪಡೆದಿದ್ದಾರೆ. ಜಿಲ್ಲೆಯಲ್ಲಿ ನಾಲ್ಕು ವರ್ಷಗಳಿಂದ ರೈತರು ಬರಗಾಲಕ್ಕೆ ತುತ್ತಾಗಿದ್ದು 9 ತಾಲ್ಲೂಕುಗಳಲ್ಲಿ 33ಗೋ ಶಾಲೆ ತೆರೆಯಲಾಯಿತು ಎಂದು ವಿವರಿಸಿದರು. ತುಮಕೂರು ಜಿಲ್ಲೆಗೆ ಎತ್ತಿನಹೊಳೆ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಈ ಯೋಜನೆಯಿಂದ ಶಿರಾ, ಪಾವಘಡ, ಚಿಕ್ಕನಾಯಕನಹಳ್ಳಿ , ಕೊರಟಗೆರೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಅನುಕೂಲವಾಗಿದೆ.

ಜಿಲ್ಲೆಯಲ್ಲಿ ಹಲವು ವಸತಿ ಪ್ರದೇಶಗಳು, ಗೊಲ್ಲರಹಟ್ಟಿಗಳು, ತಾಂಡ್ಯಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಮಹತ್ವ ಕಾರ್ಯ ಕೈಗೊಳ್ಳಲಾಗಿದ್ದು , ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ, ತುಮಕೂರು -ತಿಪಟೂರು, ರೈಲ್ವೆ ಡಬ್ಲಿಂಗ್, ಸ್ಮಾಟ್ ಸಿಟಿ ಯೋಜನೆಯಂತೆ ಹಲವಾರು ಯೋಜನೆಗಳನ್ನು ಜಿಲ್ಲೆಗೆ ತಂದು ರಾಜ್ಯದಲ್ಲೇ ತುಮಕೂರನ್ನು ಮಾದರಿ ಜಿಲ್ಲೆಯಾಗಿಸಲು ಪಣ ತೊಟ್ಟಿದ್ದೇವೆ ಎಂದರು. ಇದಕ್ಕೂ ಮುನ್ನ ಧ್ವಜಾರೋಹಣ ನೆರವೇರಿಸಿದ ಸಚಿವರು, 30 ತುಕಡಗಿಗಳ ಪರಿವೀಕ್ಷಣೆ ನಡೆಸಿ ಗೌರವವನ್ನು ಸ್ವೀಕರಿಸಿದರು. ವಿವಿಧ ಶಾಲಾಕಾಲೇಜುಗಳ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕøತಿಕ ಕಾರ್ಯಕ್ರಮಗಳು ನೆರೆದಿದ್ದ ಜನರ ಮನಸೂರೆಗೊಂಡವು. ಶಾಸಕರಾದ ಡಾ.ರಫೀಕ್ ಅಹಮ್ಮದ್, ಬಿ.ಸುರೇಶ್‍ಗೌಡ, ಸಂಸದ ಎಸ್.ಪಿ. ಮುದ್ದಹನುಮೇಗೌಡ, ವಿಧಾನಪರಿಷತ್ ಸದಸ್ಯ ಕಾಂತರಾಜ್, ಮಹಾನಗರ ಪಾಲಿಕೆ ಮೇಯರ್ ರವಿಕುಮಾರ್, ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲಾಧಿಕಾರಿ ಕೆ.ಪಿ.ಮೋಹನ್‍ರಾಜ್, ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾ.ದಿವ್ಯಾಗೋಪಿನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭರಾಣಿ ಮುಂತಾದವರಿದ್ದರು.

Facebook Comments

Sri Raghav

Admin