‘ಧ್ವಜಕ್ಕೆ ಸಲ್ಯೂಟ್ ಹೊಡೆದು ಬಾಯಿ ಮಾತಿನಲ್ಲಿ ಸಂವಿಧಾನ ಒಪ್ಪಿಕೊಂಡರೆ ಸಾಲದು’

ಈ ಸುದ್ದಿಯನ್ನು ಶೇರ್ ಮಾಡಿ

Anant-Kumar--01
ಬೆಂಗಳೂರು,ಜ.26-ಧ್ವಜಕ್ಕೆ ಸಲ್ಯೂಟ್ ಹೊಡೆದು ಬಾಯಿ ಮಾತಿನಲ್ಲಿ ಸಂವಿಧಾನ ಒಪ್ಪಿಕೊಂಡರೆ ಸಾಲದು. ನಮ್ಮ ಸಂಸ್ಕøತಿ, ಆಚಾರ-ವಿಚಾರಗಳನ್ನು ಒಪ್ಪಿಕೊಂಡಾಗ ಮಾತ್ರ ಸಂವಿಧಾನಕ್ಕೆ ಗೌರವ ನೀಡಿದಂತಾಗುತ್ತದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಎದುರಾಳಿಗಳಿಗೆ ಟಾಂಗ್ ನೀಡಿದರು.
ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ 69ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾಷಣದಲ್ಲಿ ವ್ಯಂಗ್ಯ ಮಿಶ್ರಿತವಾಗಿಯೇ ಕುಹಕವಾಡುತ್ತಿದ್ದರು. ನಾನು ಎಲ್ಲವನ್ನು ಹೇಳುವುದಕ್ಕೆ ಹೋದರೆ ಕೆಲವರು ಒಪ್ಪಿಕೊಳ್ಳುವುದಿಲ್ಲ. ಮೊದಲು ವಾಸ್ತವಿಕತೆಯನ್ನು ಅರ್ಥ ಮಾಡಿಕೊಳ್ಳಬೇಕು. ಎಲ್ಲವನ್ನು ಬಣ್ಣದ ಕನ್ನಡಕದಲ್ಲೆ ನೋಡುತ್ತಾರೆ ಎಂದು ತಿರುಗೇಟು ನೀಡಿದರು.

ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದೇ ನಮಗೆ ಸಿಕ್ಕ ಸ್ವಾತಂತ್ರ್ಯ ಎಂದು ಕೆಲವರು ಭಾವಿಸಿದ್ದಾರೆ. ಗುಲಾಮಗಿರಿ, ದಾಸ್ಯತನದಿಂದ ಹೊರಬಂದಿದ್ದೇ ನಿಜವಾದ ಸ್ವಾತಂತ್ರ್ಯ ಎಂದು ಅವರು ಅಭಿಪ್ರಾಯಪಟ್ಟರು.  ಸಂವಿಧಾನ ಒಪ್ಪಿಕೊಳ್ಳುವುದೇ ನಮ್ಮ ರಾಷ್ಟ್ರೀಯತೆನಾ? ಎಂದು ಪ್ರಶ್ನಿಸಿದ ಅನಂತಕುಮಾರ್ ಹೆಗಡೆ, ವ್ಯವಸ್ಥೆಯನ್ನು ಒಪ್ಪಿಕೊಳ್ಳುವುದೇ ನಿಜವಾದ ಸಂವಿಧಾನ. ನಾವೆಲ್ಲರೂ ಭಾರತೀಯರು ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ ಎಂದು ಹೇಳಿದರು.  ಧ್ವಜಕ್ಕೆ ಸಲ್ಯೂಟ್ ಹೊಡೆದು ಬಾಯಿ ಮಾತಿನಲ್ಲಿ ಸಂವಿಧಾನ ಒಪ್ಪಿಕೊಂಡರೆ ಸಾಲದು, ಸಂವಿಧಾನ ಒಪ್ಪಿಕೊಳ್ಳುವುದು ಎಂದರೆ ನಮ್ಮ ಭಾರತೀಯ ಸಂಸ್ಕøತಿಯನ್ನು ಗೌರವಿಸಿದಂತೆ. ಈ ಮಣ್ಣಿನ ಸಂಸ್ಕøತಿಯನ್ನು ಎಲ್ಲರು ಗೌರವಿಸಿ ಪಾಲಿಸಬೇಕು. ಅದು ಬಿಜೆಪಿಯಲ್ಲಿ ಕಾಣಲು ಮಾತ್ರ ಸಾಧ್ಯ ಎಂದರು.

ನಮ್ಮ ಮಣ್ಣಿನ ಸಂಸ್ಕøತಿಯನ್ನು ಯಾರು ಗೌರವಿಸುವುದಿಲ್ಲವೋ ಅಂಥವರು ಸಂವಿಧಾನದ ಬಗ್ಗೆ ಮಾತನಾಡುವುದೇ ವ್ಯರ್ಥ. ನಾನು ಏನೇ ಹೇಳಿದರೂ ಅದಕ್ಕೆ ವಿವಾದದ ಬಣ್ಣ ಕಟ್ಟುತ್ತಾರೆ. ಇದುದ್ದನ್ನು ಇದ್ದಂಗೆ ಹೇಳಿದರೆ ಕೆಲವರಿಗೆ ಆಗುವುದಿಲ್ಲ. ಆದರೆ ಕಂಡದ್ದನ್ನು ಕಂಡದಂತೆ ಹೇಳಬೇಕು. ಸುತ್ತಿ ಬಳಸಿ ಹೇಳುವುದರಲ್ಲಿ ಅರ್ಥವಿಲ್ಲ ಎಂದರು.   ಈ ವೇಳೆ ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Facebook Comments

Sri Raghav

Admin