ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದಾಗ ಸ್ಫೋಟ : 6 ಮಂದಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

Crackers--02
ಮೈಸೂರು, ಜ.27-ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದಾಗ ಸ್ಪೋಟಗೊಂಡು ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕು ಮಾದಾಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಅಪ್ಪು(16), ಮಧು(15), ಕುಮಾರ(15), ದರ್ಶನ್(14), ಮಲ್ಲನಾಯಕ(60), ದೇವರಾಜು(16) ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾದಾಪುರದಲ್ಲಿ ಗ್ರಾಮದೇವತೆ ಹಬ್ಬಕ್ಕಾಗಿ ಪಟಾಕಿ ತಯಾರಿಸುತ್ತಿದ್ದಾಗ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಚ್.ಡಿ.ಕೋಟೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin