ಟೋಲ್ ಕಂಬಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Hssan--02

ಹಾಸನ,ಜ.27- ಕಾರು ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ , ಮೂವರು ಗಂಭೀರ ಗಾಯಗೊಂಡಿರುವ ಘಟನೆ ಶಾಂತಿಗ್ರಾಮ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಬೆಂಗಳೂರಿನಿಂದ ಮಂಗಳೂರಿಗೆ ಸಿಫ್ಟ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಮಡೆನೂರು ಬಳಿಯ ಟೋಲ್ ಮಾಹಿತಿ ಫಲಕ ಕಂಬಕ್ಕೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಮೂವರು ಗಂಭೀರ ಗಾಯಗೊಂಡಿದ್ದು, ಹಾಸನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತಪಟ್ಟವರ ಮಾಹಿತಿ ತಿಳಿದುಬಂದಿಲ್ಲ. ಅತಿವೇಗವೇ ಈ ಅವಘಡಕ್ಕೆ ಕಾರಣವಾಗಿದೆ. ಅಪಘಾತ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಾಂತಿಗ್ರಾಮ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments

Sri Raghav

Admin