ಬೆಂಗಳೂರು ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

voter

ಬೆಂಗಳೂರು ಗ್ರಾಮಾಂತರ, ಜ.27- ಬೆಂಗಳೂರು ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ಧಗೊಂಡಿದ್ದು, ಸಾರ್ವಜನಿಕರ ಮಾಹಿತಿಗಾಗಿ ಮತದಾರರ ಪಟ್ಟಿಯ ಒಂದು ಪ್ರತಿಯನ್ನು ತಿದ್ದುಪಡಿಯ ಪಟ್ಟಿಯೊಂದಿಗೆ ಪ್ರಕಟಿಸಲಾಗಿದೆ. ಮತದಾರರ ನೋಂದಾಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಬೆಂಗಳೂರು ವಿಭಾಗ, ಬೆಂಗಳೂರು. ಕಚೇರಿಯಲ್ಲಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಉಪವಿಭಾಗಾಧಿಕಾರಿಗಳ ಕಚೇರಿಗಳಲ್ಲಿ, ತಾಲ್ಲೂಕು ತಹಸೀಲ್ದಾರರುಗಳ ಕಚೇರಿಗಳಲ್ಲಿ ಮತ್ತು ವಿಶೇಷ ಆಯುಕ್ತರು (ಆಡಳಿತ), ಜಂಟಿ ಆಯುಕ್ತರು (ಪೂರ್ವ ವಲಯ), ಜಂಟಿ ಆಯುಕ್ತರು (ಪಶ್ಚಿಮ ವಲಯ), ಜಂಟಿ ಆಯುಕ್ತರು (ದಕ್ಷಿಣ ವಲಯ), ಜಂಟಿ ಆಯುಕ್ತರು (ಬೊಮ್ಮನಹಳ್ಳಿ ವಲಯ), ಜಂಟಿ ಆಯುಕ್ತರು (ರಾಜರಾಜೇಶ್ವರಿನಗರ ವಲಯ), ಜಂಟಿ ಆಯುಕ್ತರು (ಮಹದೇವಪುರ ವಲಯ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರವರ ಕಚೇರಿಯಲ್ಲಿ ಪರಿಶೀಲನೆಗಾಗಿ ದೊರೆಯುತ್ತದೆಂದು ಬೆಂಗಳೂರು ಪದವೀಧರರ ಕ್ಷೇತ್ರ ಮತದಾರರ ನೋಂದಾಣಾಧಿಕಾರಿ ಹಾಗೂ ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments

Sri Raghav

Admin