ಬಿಜೆಪಿಯವರು ಜಾತಿ ಕನ್ನಡಕ ತೆಗೆದು ನೋಡಲಿ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಬೆಂಗಳೂರು, ಜ.28- ಬಿಜೆಪಿಯವರು ಜಾತಿ ಕನ್ನಡಕ ಹಾಕಿಕೊಂಡು ಎಲ್ಲವನ್ನೂ ಅದ ರಿಂದಲೇ ನೋಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮು ಗಲಭೆ ಹಾಗೂ ಇನ್ನಿತರೆ ಪ್ರಕರಣಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕೇಸುಗಳನ್ನು ಮಾತ್ರ ಕೈ ಬಿಡಲು ಸರ್ಕಾರ ಮುಂದಾಗಿದೆ ಎಂಬ ಬಿಜೆಪಿ ಆರೋಪ ಸರಿಯಲ್ಲ. ಈ ವಿಷಯಕ್ಕೆ ರಾಜಕೀಯ ಬಣ್ಣ ಹಚ್ಚುವುದು ಸಮಂಜಸವಲ್ಲ ಎಂದರು.

ಯಾವುದೇ ಜಾತಿ, ಧರ್ಮದವರಾಗಿರಲಿ ಜನಪರ ಹೋರಾಟಗಳಲ್ಲಿ ಭಾಗಿಯಾಗಿರುವ ನಿರಪರಾಧಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದರೆ ವಾಪಸ್ ಪಡೆಯುತ್ತೇವೆ. ಅಲ್ಪಸಂಖ್ಯಾತರ ವಿಷಯ ಮಾತ್ರ ಏಕೆ ಪ್ರಸ್ತಾಪವಾಗುತ್ತಿದೆ ಎಂದು ಪ್ರಶ್ನಿಸಿದರು.  ಅಲ್ಪಸಂಖ್ಯಾತರ ಸ್ಥಿತಿಗತಿ ಮತ್ತು ಅವರ ಅಭಿವೃದ್ಧಿ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಸಾಚಾರ್ ಸಮಿತಿ ನೇಮಕವಾಗಿತ್ತು. ಜತೆಗೆ ರಂಗನಾಥ ಮಿಶ್ರಾ ಅವರ ಸಮಿತಿಯೂ ರಚನೆಯಾಗಿತ್ತು ಎಂದು ಹೇಳಿದರು.
ಬಿಜೆಪಿಯವರು ಕೇವಲ ಅಲ್ಪಸಂಖ್ಯಾತರ ಬಗ್ಗೆಯೇ ಬೊಟ್ಟು ಮಾಡಿ ಹೇಳುವುದು ಏಕೆ ? ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಎಲ್ಲಾ ಧರ್ಮದವರೂ ಭಾಗವಹಿಸಿಲ್ಲವೇ ? ಬಿಜೆಪಿಯವರು ಮೊದಲು ಜಾತಿ ಎಂಬ ಕನ್ನಡಕವನ್ನು ಕಳಚಿ, ಮಾನವೀಯ ದೃಷ್ಟಿಯಿಂದ ನೋಡುವುದನ್ನು ಕಲಿಯಲಿ ಎಂದು ಮುಖ್ಯಮಂತ್ರಿಯವರು ತಿರುಗೇಟು ನೀಡಿದರು.

Facebook Comments

Sri Raghav

Admin