ಸಿದ್ಧಗಂಗಾ ಶ್ರೀಗಳ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಚಿವ ಟಿ.ಬಿ.ಜಯಚಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

Jayachandra-v-01
ತುಮಕೂರು, ಜ.28-ಸಿದ್ಧಗಂಗಾಶ್ರೀಗಳು ಶೀಘ್ರ ಗುಣಮುಖರಾಗಲಿ. ಇಡೀ ನಾಡಿನ ಅವರ ಮಾರ್ಗದರ್ಶನ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಇಂದಿಲ್ಲಿ ಹಾರೈಸಿದರು.ಇಂದು ಬೆಳಗ್ಗೆ ಹಳೇ ಮಠಕ್ಕೆ ಭೇಟಿ ನೀಡಿದ ಸಚಿವರು ಡಾ.ಶ್ರೀ. ಶಿವಕುಮಾರಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯಿಂದಲೇ ಶ್ರೀಗಳ ಆರೋಗ್ಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಇಂದು ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಶ್ರೀಗಳು ಶೀಘ್ರಗುಣಮುಖರಾಗಲಿ ಎಂದರು.

ಶ್ರೀಗಳ ಕೋಟ್ಯಂತರ ಅಭಿಮಾನಿಗಳಲ್ಲಿ ನಾನೂ ಒಬ್ಬ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಕೆ.ಪಿ.ಮೋಹನ್‍ರಾಜ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾಗೋಪಿನಾಥ್, ಡಿವೈಎಸ್ಪಿ ನಾಗರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook Comments

Sri Raghav

Admin