ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಬಸ್, ನಿರ್ವಾಹಕ ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--01
ಚಾಮರಾಜನಗರ, ಜ.29- ಕೇರಳದ ಸಾರಿಗೆ ಸಂಸ್ಥೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇರಳ ಮೂಲದ ಬಿಜ್ಜು (32) ಮೃತಪಟ್ಟ ನಿರ್ವಾಹಕ ಎಂದು ಗುರುತಿಸಲಾಗಿದೆ. ರಾತ್ರಿ ಕೇರಳದಿಂದ ಪ್ರಯಾಣಿಕರನ್ನು ಕರೆ ತರುತ್ತಿದ್ದ ಬಸ್ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನ ಬೀಡು ಗ್ರಾಮದ ಬಳಿ ಮುಂಜಾನೆ ಬರುತ್ತಿತ್ತು.

ಈ ವೇಳೆ ಚಾಲಕ ನಿದ್ರೆ ಮಂಪರಿನಿಂದಾಗಿ ಸೇತುವೆಯ ತಡೆಗೋಡೆಗೆ ಬಸ್ ಡಿಕ್ಕಿ ಹೊಡೆದು ನಿಂತಿದೆ. ಪರಿಣಾಮವಾಗಿ ಮುಂದಿನ ಸೀಟಿನಲ್ಲಿ ಮಲಗಿದ್ದ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಯಾಣಿಕರನ್ನು ಬೇರೆ ಬಸ್‍ನಲ್ಲಿ ಹೋಗಲು ವ್ಯವಸ್ಥೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin